ADVERTISEMENT

ಓಮೈಕ್ರಾನ್: ಖಾಸಗಿ ಆಸ್ಪತ್ರೆಯಲ್ಲಿಯೂ ಚಿಕಿತ್ಸೆ- ಆರೋಗ್ಯ ಇಲಾಖೆಯ ಸುತ್ತೋಲೆ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2021, 21:54 IST
Last Updated 10 ಡಿಸೆಂಬರ್ 2021, 21:54 IST
ಓಮೈಕ್ರಾನ್: ಖಾಸಗಿ ಆಸ್ಪತ್ರೆಯಲ್ಲಿಯೂ ಚಿಕಿತ್ಸೆ
ಓಮೈಕ್ರಾನ್: ಖಾಸಗಿ ಆಸ್ಪತ್ರೆಯಲ್ಲಿಯೂ ಚಿಕಿತ್ಸೆ   

ಬೆಂಗಳೂರು: ಕೊರೊನಾ ವೈರಾಣುವಿನ ರೂಪಾಂತರಿ ಓಮೈಕ್ರಾನ್ ಸೋಂಕಿಗೆ ಒಳಗಾದ ಅಂತರರಾಷ್ಟ್ರೀಯ ಪ್ರಯಾಣಿಕರು ಖಾಸಗಿ ಆಸ್ಪತ್ರೆಗಳಲ್ಲಿಯೂ ಚಿಕಿತ್ಸೆ ಪಡೆದುಕೊಳ್ಳಬಹುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಈ ಬಗ್ಗೆ ಇಲಾಖೆಯ ಆಯುಕ್ತ ಡಿ. ರಂದೀಪ್ ಸುತ್ತೋಲೆ ಹೊರಡಿಸಿದ್ದಾರೆ. ಅಧಿಕ ಸಂಖ್ಯೆಯಲ್ಲಿ ಓಮೈಕ್ರಾನ್ ಪ್ರಕರಣಗಳು ವರದಿಯಾದ ದೇಶಗಳನ್ನು ಅಪಾಯಕಾರಿ ಗುಂಪಿಗೆ ಸೇರಿಸಲಾಗಿದ್ದು, ಈ ದೇಶಗಳಿಂದ ಬರುವ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಆರ್‌ಟಿ–ಪಿಸಿಆರ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಓಮೈಕ್ರಾನ್ ಸೋಂಕಿತರು ಹಾಗೂ ಸೋಂಕು ಶಂಕಿತರಿಗೆ ಪ್ರತ್ಯೇಕ ವಾಸಕ್ಕೆ ಬೆಂಗಳೂರಿನ ಬೌರಿಂಗ್ ಹಾಗೂ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯನ್ನು ಮೀಸಲಿಡಲಾಗಿದೆ.

‘ಸರ್ಕಾರಿ ವ್ಯವಸ್ಥೆಯಡಿ ಚಿಕಿತ್ಸೆ ಪಡೆಯಲು ಇಚ್ಛಿಸದವರು ತಮ್ಮ ಸ್ವಂತ ಖರ್ಚಿನಲ್ಲಿ ನಿಗದಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ಈಗಾಗಲೇ ಹೊರಡಿಸಲಾದ ಮಾರ್ಗಸೂಚಿಯನ್ನು ಚಿಕಿತ್ಸೆ ನೀಡುವ ಖಾಸಗಿ ಆಸ್ಪತ್ರೆಗಳು ಪಾಲಿಸಬೇಕು’ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.