ಬೆಂಗಳೂರು: ವಾಣಿಜ್ಯ ಮಳಿಗೆ ಹಾಗೂ ಬಹುಮಹಡಿ ಕಟ್ಟಡಗಳ ನಿರ್ಮಾಣಕ್ಕಾಗಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ನೀಡುವ ನಿರಾಕ್ಷೇಪಣಾ ಪತ್ರ (ಎನ್‌ಒಸಿ) ಹಾಗೂ ಕಾಮಗಾರಿ ಪೂರ್ಣಗೊಂಡ ಪ್ರಮಾಣ ಪತ್ರ (ಸಿ.ಸಿ) ಇನ್ನು ಮುಂದೆ ಆನ್‌ಲೈನ್‌ನಲ್ಲೇ ಸಿಗಲಿದೆ. ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ.
‘ಎನ್‌ಒಸಿ ಮತ್ತು ಸಿ.ಸಿ ನೀಡಲು ಭೌತಿಕವಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಗಳನ್ನು ಕೈಬಿಡಲಾಗಿದೆ. ಸಾರ್ವಜನಿಕರು ಆನ್‌ಲೈನ್ ಮೂಲಕವೇ ಈ ಸೇವೆ ಪಡೆಯಬಹುದು. ಈ ಬಗ್ಗೆ ವಿಸ್ತೃತ ಪ್ರಕಟಣೆಯೊಂದನ್ನು ಸದ್ಯದಲ್ಲೇ ಬಿಡುಗಡೆ ಮಾಡಲಾಗುವುದು’ ಎಂದುಇಲಾಖೆಯ ಅಧಿಕಾರಿಯೊಬ್ಬರುತಿಳಿಸಿದ್ದಾರೆ.
‘ಸೇವಾ ಸಿಂಧು’ ಜಾಲತಾಣದಲ್ಲಿ ಅರ್ಜಿ ಸಲ್ಲಿಸಬೇಕು. ಕಟ್ಟಡದ ವಿವರ, ನೀಲನಕ್ಷೆ, ಕಟ್ಟಡ ನಿರ್ಮಾಣದ ಉದ್ದೇಶ ಸೇರಿ ಎಲ್ಲ ಮಾಹಿತಿ ನೀಡಬೇಕು. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕ್ರಮ ಕೈಗೊಳ್ಳಲಿದ್ದಾರೆ’ ಎಂದೂ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.