ADVERTISEMENT

ಆನ್‌ಲೈನ್‌ನಲ್ಲಿ ‘ವೈನ್‌’ ಖರೀದಿಸಿ ₹50 ಸಾವಿರ ಕಳೆದುಕೊಂಡ ಯುವತಿ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2022, 19:10 IST
Last Updated 30 ಮಾರ್ಚ್ 2022, 19:10 IST
   

ಬೆಂಗಳೂರು: ಆನ್‌ಲೈನ್‌ನಲ್ಲಿ ‘ವೈನ್‌’ ಕಾಯ್ದಿರಿಸಿದ್ದ ಯುವತಿಯೊಬ್ಬರ ಬ್ಯಾಂಕ್ ಖಾತೆಯಿಂದ ಸೈಬರ್‌ ವಂಚಕರು ₹50 ಸಾವಿರ ಮೊತ್ತ ಡ್ರಾ ಮಾಡಿಕೊಂಡಿದ್ದಾರೆ.

ಲಾಲ್‌ಬಾಗ್ ರಸ್ತೆಯ ವಸತಿ ಸಮುಚ್ಚಯವೊಂದರಲ್ಲಿ ನೆಲೆಸಿರುವ 22 ವರ್ಷದ ಯುವತಿ ಈ ಸಂಬಂಧ ಕೇಂದ್ರ ವಿಭಾಗದ ಸಿಇಎನ್‌ ಠಾಣೆಗೆ ದೂರು ನೀಡಿದ್ದಾರೆ.

‘ಯುವತಿಯು ವೆಬ್‌ಸೈಟ್‌ವೊಂದರ ಮೂಲಕ ವೈನ್‌ ಕಾಯ್ದಿರಿಸಿದ್ದರು. ₹540 ಮೊತ್ತವನ್ನೂ ಪಾವತಿಸಿದ್ದರು. ಅವರಿಗೆ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿಯೊಬ್ಬ ಕೆಲ ನಿಮಿಷಗಳಲ್ಲಿ ನಿಮ್ಮ ಮನೆಗೆ ‘ವೈನ್‌’ ತಲುಪಿಸಲಿದ್ದೇನೆ. ಅದಕ್ಕೂ ಮುನ್ನ ₹10 ಶುಲ್ಕ ಪಾವತಿಸುವಂತೆ ಸೂಚಿಸಿದ್ದ. ನಿಮ್ಮ ಮೊಬೈಲ್‌ಗೆ ಬಂದಿರುವ ಒಟಿಪಿ ಹೇಳುವಂತೆ ತಿಳಿಸಿದ್ದ. ಆತನ ಮಾತು ನಂಬಿ ಒಟಿಪಿ ಹೇಳಿದ್ದರು. ಕೂಡಲೇ ಅವರ ಬ್ಯಾಂಕ್‌ ಖಾತೆಯಿಂದ ಹಣ ಡ್ರಾ ಆಗಿತ್ತು’ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.