ADVERTISEMENT

ದೀಪಾವಳಿಗೆ ಹಸಿರು ಪಟಾಕಿಗೆ ಮಾತ್ರ ಅವಕಾಶ: ಸಿಎಂ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2024, 15:38 IST
Last Updated 26 ಅಕ್ಟೋಬರ್ 2024, 15:38 IST
<div class="paragraphs"><p>ಸಿಎಂ ಸಿದ್ದರಾಮಯ್ಯ</p></div>

ಸಿಎಂ ಸಿದ್ದರಾಮಯ್ಯ

   

ಬೆಂಗಳೂರು: ‘ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶವಿದ್ದು, ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು’ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ.

‘ಪಟಾಕಿ ದಾಸ್ತಾನು, ಮಾರಾಟ ಪ್ರಕ್ರಿಯೆಯಲ್ಲಿ ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪ ಆಗದಂತೆ ನೋಡಿಕೊಳ್ಳಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು’ ಎಂದೂ ಅವರು ಸೂಚಿಸಿದ್ದಾರೆ.

ADVERTISEMENT

‘ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಬೇಕು. ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ‌ ಮಾರಾಟ ಮಾಡಲು ಅವಕಾಶ ಇಲ್ಲ. ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು’ ಎಂದು ಪಟಾಕಿ ಮಾರಾಟಗಾರರಿಗೆ ಮುಖ್ಯಮಂತ್ರಿ ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.