ಗೋಕರ್ಣ: ಸರ್ಕಾರದ ಆದೇಶದಂತೆ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಅವಕಾಶ ಮಾಡಲಾಗಿದೆ. 15 ದಿನ ಸ್ಥಳೀಯರಿಗೆ ಮಾತ್ರ ದರ್ಶನಕ್ಕೆ ಅವಕಾಶವಿದ್ದು, ಕಡ್ಡಾಯವಾಗಿ ಮುಖಗವಸು ಧರಿಸಬೇಕು ಹಾಗೂ ಅಂತರ ಕಾಯ್ದುಕೊಳ್ಳಬೇಕು ಎಂದು ದೇವಸ್ಥಾನದ ಆಡಳಿತಧಿಕಾರಿ ಜಿ.ಕೆ.ಹೆಗಡೆ ತಿಳಿಸಿದ್ದಾರೆ.
ಗರ್ಭಗುಡಿಗೆ ಪ್ರವೇಶವಿಲ್ಲ:ಸ್ಥಳೀಯರಿಗೂ ನಂದಿಗೃಹದವರೆಗೆ ಮಾತ್ರ ಹೋಗಲು ಅವಕಾಶವಿದ್ದು, ಅಲ್ಲಿಂದಲೇ ನಿಂತು ದರ್ಶನ ಪಡೆಯಬೇಕು ಎಂದು ತಿಳಿಸಿದ್ದಾರೆ. ಸರ್ಕಾರದ ಸೂಚನೆಯಂತೆ ತೀರ್ಥ ಮತ್ತು ಪ್ರಸಾದ ವಿತರಣೆ ಇರುವುದಿಲ್ಲ ಎಂದು ಜಿ.ಕೆ.ಹೆಗಡೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.