ಕೊಪ್ಪಳ: ‘ತಮ್ಮ ಪಕ್ಷದ ಬಗ್ಗೆ ಅಸಮಾಧಾನ ಹೊಂದಿರುವ ಜಿಲ್ಲೆಯ ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಬರುವುದಾದರೆ ಅವರನ್ನು ಕರೆತರುವ ಆಪರೇಷನ್ ಕಾಂಗ್ರೆಸ್‌ನ ನೇತೃತ್ವವನ್ನು ನಾನೇ ವಹಿಸಿಕೊಳ್ಳುತ್ತೇನೆ’ ಎಂದುಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಹೇಳಿದರು.
'ಇಷ್ಟು ದಿನ ಕೇವಲ ‘ಆಪರೇಷನ್ ಕಮಲ’ ಎನ್ನುವ ಸುದ್ದಿ ಕೇಳುತ್ತಿದ್ದೆವು. ಆದರೆ, ಈಗ ಆಪರೇಷನ್ ಕಾಂಗ್ರೆಸ್ ಎಂದು ಹೇಳುತ್ತಿದ್ದೀರಿ. ಮಾಧ್ಯಮಗಳ ಈ ಬದಲಾವಣೆ ನನಗೆ ಸಂತಸ ತಂದಿದೆ. ಈ ಆಪರೇಷನ್‌ಗಳಿಂದ ಕೆಲಸ ಕಾರ್ಯ ಮಾಡಲು ತೊಂದರೆ ಆಗಿದೆ’ ಎಂದರು.
‘ಜಿಲ್ಲೆಯಲ್ಲಿ ಇಬ್ಬರು ಕಾಂಗ್ರೆಸ್ ಶಾಸಕರಿದ್ದೇವೆ.ಒಬ್ಬರಿಗೆ ಸಚಿವ ಸ್ಥಾನ ನೀಡಿದರೆ ಜಿಲ್ಲೆಯ ಅಭಿವೃದ್ಧಿಗೆ ಅನುಕೂಲ ಆಗುತ್ತದೆ. ಬೇರೆ ಜಿಲ್ಲೆಯ ಸಚಿವರಿಗೆ ಕೊಪ್ಪಳ ಜಿಲ್ಲೆಯ ಉಸ್ತುವಾರಿ ನೀಡಿದರೆ ಅವರುತಿಂಗಳಿಗೆ ಎರಡು ಬಾರಿ ಬಂದು ಹೋಗುತ್ತಾರೆ. ಇದರಿಂದ ಜಿಲ್ಲೆಯ ಅಭಿವೃದ್ಧಿ ಹೇಗೆ ಸಾಧ್ಯ' ಎಂದು ಪ್ರಶ್ನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.