ಕಲಬುರ್ಗಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧದ ‘ಆಪರೇಷನ್ ಕಮಲ ಆಡಿಯೊ ಪ್ರಕರಣ’ವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ.
‘ನಮ್ಮ ತಂದೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿಸಲು ಆಮಿಷವೊಡ್ಡಲಾಗಿತ್ತು’ ಎಂದು ಆರೋಪಿಸಿ ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ನಾಗನಗೌಡ ಕಂದಕೂರ ಅವರ ಪುತ್ರ ಶರಣಗೌಡ ಪಾಟೀಲ ಕಂದಕೂರ ದೂರು ಸಲ್ಲಿಸಿದ್ದರು.
ರಾಯಚೂರು ಜಿಲ್ಲೆಯ ದೇವ ದುರ್ಗ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿ
ಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು.
ತಡೆಯಾಜ್ಞೆ ತೆರವುಗೊಳಿಸುವಂತೆ ಶರಣಗೌಡ ಅವರು ಮೇಲ್ಮನವಿ ಸಲ್ಲಿಸಿದ್ದಾರೆ. ಈ ಪ್ರಕರಣ ತನ್ನ ಎದುರು ಬುಧವಾರ ವಿಚಾರಣೆಗೆ ಬಂದಾಗ,ನ್ಯಾಯಮೂರ್ತಿ ಎಸ್. ವಿಶ್ವಜೀತ್ ಶೆಟ್ಟಿ ಅವರಿದ್ದ ಪೀಠ, ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಿತು ಎಂದು ಆರೋಪಿ ಪರ ವಕೀಲ ವಿಲಾಸಕುಮಾರ್ ತಿಳಿಸಿದ್ದಾರೆ.
‘ಆಪರೇಷನ್ ಕಮಲ’ ಆಡಿಯೊ ಪ್ರಕರಣ ದಾಖಲಾಗಿದ್ದಾಗ ಬಿ.ಎಸ್. ಯಡಿಯೂರಪ್ಪ ಅವರು ವಿರೋಧ ಪಕ್ಷದ ನಾಯಕರಾಗಿದ್ದರು. ಪ್ರಕರಣದಲ್ಲಿ ದೇವದುರ್ಗ ಶಾಸಕ ಕೆ. ಶಿವನಗೌಡ ನಾಯಕ್, ಹಾಸನ ಶಾಸಕ ಪ್ರೀತಂಗೌಡ ಹಾಗೂ ಪತ್ರಕರ್ತಮರಮಕಲ್ ಹೆಸರೂ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.