ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ತಿಮ್ಮಸಂದ್ರ ಗ್ರಾಮದಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿರುವ ಜಮೀನಿನಲ್ಲಿ ಉಳುಮೆ ಮಾಡಲು ಮುಂದಾಗಿದ್ದ ರೈತರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿರುವುದು ಖಂಡನೀಯ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದ್ದಾರೆ.
'ತನ್ನ ಓಲೈಕೆ ರಾಜಕಾರಣಕ್ಕೆ ರೈತರನ್ನು ಬಲಿಕೊಡಲು ಈ ಕಟುಕ ಕಾಂಗ್ರೆಸ್ ಸರ್ಕಾರ ಮುಂದಾಗಿದೆ' ಎಂದು ಅವರು ‘ಎಕ್ಸ್’ನಲ್ಲಿ ಕಿಡಿಕಾರಿದ್ದಾರೆ.
‘ರೈತರ ಜಮೀನಿನ ಮೇಲೆ ಕಬ್ಜಾ ಮಾಡುವುದೇ ಅಲ್ಲದೇ, ಅವರ ಮೇಲೆ ಲಾಠಿ ಪ್ರಹಾರ ಮಾಡಿ, ಟ್ರ್ಯಾಕ್ಟರ್ ವಶಕ್ಕೆ ಪಡೆದು ರೈತರ ವಿರುದ್ಧ ದೂರು ದಾಖಲಿಸಿಕೊಂಡಿದ್ದೀರಲ್ಲ, ನಿಮಗೆ ನಾಡಿನ ರೈತರಿಗಿಂತ ಓಲೈಕೆ ರಾಜಕಾರಣವೇ ಹೆಚ್ಚಾಯಿತೇ ’ ಎಂದು ಅಶೋಕ ಪ್ರಶ್ನಿಸಿದ್ದಾರೆ.
‘ಅನ್ನ ಹಾಕುವ ಕೈಗಳಿಗೆ ಕೋಳ ತೊಡಿಸುವ ಕಾಂಗ್ರೆಸ್ ಸರ್ಕಾರದ ಪಾಪದ ಕೊಡ ತುಂಬಿದೆ. ಅನ್ನದಾತರ ಶಾಪ ಈ ಸರ್ಕಾರವನ್ನು ಸುಡುವ ದಿನ ದೂರವಿಲ್ಲ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.