ADVERTISEMENT

ನಮ್ಮ ಕುಟುಂಬದವರ ದೂರವಾಣಿ ಕದ್ದಾಲಿಕೆ ನಡೆಯುತ್ತಿದೆ: ಕುಮಾರಸ್ವಾಮಿ ಆರೋಪ

​ಪ್ರಜಾವಾಣಿ ವಾರ್ತೆ
Published 20 ಮೇ 2024, 11:51 IST
Last Updated 20 ಮೇ 2024, 11:51 IST
ಎಚ್.ಡಿ. ಕುಮಾರಸ್ವಾಮಿ
ಎಚ್.ಡಿ. ಕುಮಾರಸ್ವಾಮಿ   

ಬೆಂಗಳೂರು: ‘ನನ್ನ ಮತ್ತು ನಮ್ಮ ಕುಟುಂಬದವರ ದೂರವಾಣಿ ಕದ್ದಾಲಿಕೆ ನಡೆಯುತ್ತಿದೆ. ಕುಟುಂಬದ ಎಲ್ಲ ಸದಸ್ಯರ ಮೊಬೈಲ್‌ ಫೋನ್‌ಗಳನ್ನು ಕದ್ದಾಲಿಸಲಾಗುತ್ತಿದೆ’ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಆರೋಪಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನನ್ನ ಸುತ್ತ ಇರುವ 45 ಜನರ ಮೊಬೈಲ್‌ ಫೋನ್‌ಗಳನ್ನೂ ಕದ್ದಾಲಿಸಲಾಗುತ್ತಿದೆ’ ಎಂದರು.

‘ಎಲ್‌.ಆರ್‌. ಶಿವರಾಮೇಗೌಡ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿಕೊಂಡು ದೇವೇಗೌಡರ ಕುಟುಂಬದ ವಿರುದ್ಧ ಷಡ್ಯಂತ್ರ ನಡೆಸಿರುವ ಆಡಿಯೊ ತುಣುಕು ಬಹಿರಂಗವಾಗಿದೆ. ಶಿವಕುಮಾರ್‌ ಪಾತ್ರ ಇರುವುದು ಸ್ಪಷ್ಟವಾಗಿ. ಇಬ್ಬರ ವಿರುದ್ಧವೂ ಪ್ರಕರಣ ದಾಖಲಿಸಬೇಕು. ಆ ಆಡಿಯೊ ಮತ್ತು ವಿಡಿಯೊ ಅಸಲಿಯತ್ತು ಹೊರ ಬರಬೇಕು’ ಎಂದು ಆಗ್ರಹಿಸಿದರು.

ADVERTISEMENT

‘ಡಿ.ಕೆ. ಶಿವಕುಮಾರ್ ಈ ರೀತಿಯ ರಾಜಕೀಯ ಮಾಡಬೇಕಾ? ನಾನು ಯಾವುದೇ ರಕ್ಷಣಾತ್ಮಕ ಆಟ ಆಡುತ್ತಿಲ್ಲ. ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂಬ ಮಾತಿಗೆ ಬದ್ಧನಾಗಿದ್ದೇನೆ. ಸಂತ್ರಸ್ತ ಮಹಿಳೆಯರು ಮಾನಸಿಕವಾಗಿ ಕುಗ್ಗಬಾರದು. ಪ್ರಜ್ವಲ್‌ನಿಂದ ತಪ್ಪಾಗಿದ್ದರೆ ದಯವಿಟ್ಟು ಅಂಜಬೇಡಿ. ನಾವು ಮನುಷತ್ವ ಇಲ್ಲದ ಜನ ಅಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.