ADVERTISEMENT

ಪಠ್ಯಕ್ಕೆ ಹೊರತಾದ ಪ್ರಶ್ನೆ: ಕೆಇಎ ವರದಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 2 ಮೇ 2024, 16:16 IST
Last Updated 2 ಮೇ 2024, 16:16 IST
ಕೆಇಎ
ಕೆಇಎ   

ಬೆಂಗಳೂರು: ಎಂಜನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಪಠ್ಯಕ್ಕೆ ಹೊರತಾದ ಪ್ರಶ್ನೆಗಳು ಸೇರಿದ್ದ ಪ್ರಕರಣ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಉನ್ನತ ಶಿಕ್ಷಣ ಇಲಾಖೆಗೆ ವರದಿ ಸಲ್ಲಿಸಿದೆ.

ವೈದ್ಯಕೀಯ ಶಿಕ್ಷಣ ಹೊರತುಪಡಿಸಿ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಪ್ರತಿ ವರ್ಷ ಸರಾಸರಿ 3 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಬರೆಯತ್ತಾರೆ. ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶುಸಂಗೋಪನೆ, ಯೋಗ ಮತ್ತು ನ್ಯಾಚುರೋಪಥಿ, ಬಿ ಫಾರ್ಮಾ, ಡಿ ಫಾರ್ಮಾ ಹಾಗೂ ನರ್ಸಿಂಗ್‌ ಕೋರ್ಸ್‌ಗಳಿಗೆ ಈ ಪ್ರವೇಶ ಪರೀಕ್ಷೆ ನಡೆಸುವುದರಿಂದ ವಿದ್ಯಾರ್ಥಿಗಳ ಆಳವಾದ ಜ್ಞಾನ ಪರೀಕ್ಷಿಸಲು ವಿಸ್ತೃತ ಪಠ್ಯಕ್ರಮ ಅನುಸರಿಸಲಾಗುತ್ತದೆ ಹೊರತು ಆಯಾ ಶೈಕ್ಷಣಿಕ ವರ್ಷದ ಪಠ್ಯಪುಸ್ತಕವನ್ನಲ್ಲ ಎಂದು ವರದಿಯಲ್ಲಿ ವಿವರಿಸಿದೆ. 

ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ನಡೆಸುವ ನೀಟ್‌, ಐಐಟಿ ಮತ್ತಿತರ ಪ್ರವೇಶಕ್ಕೆ ನಡೆಸುವ ಜೆಇಇ ಪರೀಕ್ಷೆಗಳಿಗೆ ಇಂತಹ ಕ್ರಮವನ್ನೇ ಅನುಸರಿಸಲಾಗುತ್ತದೆ. ತರಬೇತಿ ಕೇಂದ್ರಗಳೂ ವಿಸ್ತೃತ ಪಠ್ಯಕ್ರಮದ ಆಧಾರದಲ್ಲೇ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತವೆ. ಆದರೆ, ಪದವಿಪೂರ್ವ ಕಾಲೇಜುಗಳಲ್ಲಿ ಮಾತ್ರ ಪಠ್ಯಪುಸ್ತಕ ಅನುಸರಿಸುತ್ತವೆ. ಪ್ರಾಧಿಕಾರದಿಂದ ಯಾವುದೇ ಲೋಪವಾಗಿಲ್ಲ ಎಂದು ವಿವರಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.