ADVERTISEMENT

ಮರಗಳ ಮಹಾತಾಯಿ ‘ಸಾಲುಮರದ ತಿಮ್ಮಕ್ಕ’

​ಪ್ರಜಾವಾಣಿ ವಾರ್ತೆ
Published 26 ಜನವರಿ 2019, 10:29 IST
Last Updated 26 ಜನವರಿ 2019, 10:29 IST
ಸಾಲುಮರದ ತಿಮ್ಮಕ್ಕ
ಸಾಲುಮರದ ತಿಮ್ಮಕ್ಕ   

ರಾಮನಗರ: ಸಾಲುಮರದ ತಿಮ್ಮಕ್ಕ ಅವರು ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿದ ಪರಿಸರವಾದಿ.

ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದವರು. ಅವರನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ. ಮುಂದಿನ ಪೀಳಿಗೆಯ ಹಿತದೃಷ್ಟಿಯನ್ನು ಮನಗಂಡು ಮರಗಳಿಗೆ ನೀರುಣಿಸಿ ಬೆಳೆಸಿದ್ದಾರೆ.

ತಿಮ್ಮಕ್ಕ ಅವರು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಹೊಸೂರು ಗ್ರಾಮದಲ್ಲಿ ಜನಿಸಿದರು. ಅವರಿಗೆ ಯಾವುದೇ ಔಪಚಾರಿಕ ಶಿಕ್ಷಣ ಲಭಿಸಲಿಲ್ಲ. ಹತ್ತಿರದ ಒಂದು ಕಲ್ಲು ಗಣಿಯಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡಿದರು. ಇವರು ಚಿಕ್ಕಯ್ಯ ಎಂಬ ಒಬ್ಬ ದನ ಕಾಯುವವರನ್ನು ಮದುವೆಯಾಗಿದ್ದು, ಅವರು ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದವರು. ತಿಮ್ಮಕ್ಕ ಅವರು ಮಕ್ಕಳಿರದ ದುಃಖವನ್ನು ಮರೆಯಲು ಆಲದ ಮರಗಳನ್ನು ನೆಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.