ADVERTISEMENT

ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ: ನಾಸಿರ್ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2024, 16:48 IST
Last Updated 4 ಮಾರ್ಚ್ 2024, 16:48 IST
ಆರ್‌.ಅಶೋಕ
ಆರ್‌.ಅಶೋಕ   

ಬೆಂಗಳೂರು: ‘ಪಾಕಿಸ್ತಾನ್‌ ಜಿಂದಾಬಾದ್‌’ ಎಂದು ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭೆಯ ಕಾಂಗ್ರೆಸ್‌ ಸದಸ್ಯ ಸೈಯ್ಯದ್‌ ನಾಸಿರ್‌ ಹುಸೇನ್ ಅವರ ವಿರುದ್ಧವೂ ಪ್ರಕರಣ ದಾಖಲಿಸುವಂತೆ ವಿರೋಧಪಕ್ಷದ ನಾಯಕ ಆರ್‌.ಅಶೋಕ ಒತ್ತಾಯಿಸಿದ್ದಾರೆ.

‘ಈ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದರೆ ಸಾಲದು. ಇವರ ಮೇಲೆ ಐಪಿಸಿಯ ಸೆಕ್ಷನ್‌ 124 ಎ ಅಡಿ ದೇಶ ದ್ರೋಹ ಪ್ರಕರಣ ದಾಖಲಿಸಬೇಕು. ನಾಸಿರ್‌ ಅವರನ್ನೂ ಸೇರಿಸಬೇಕು’ ಎಂದು ‘ಎಕ್ಸ್‌’ನಲ್ಲಿ ಹೇಳಿದ್ದಾರೆ.

ಅಲ್ಲದೇ, 25 ಜನರಿಗೆ ಪಾಸ್‌ ನೀಡಿ, ಸುಮಾರು ನೂರು ಬೆಂಬಲಿಗರಿಗೆ ವಿಧಾನಸೌಧದ ಒಳಗೆ ಪ್ರವೇಶ ನೀಡಿ ಕರ್ತವ್ಯ ಲೋಪ ಎಸಗಿದ ಪೊಲೀಸ್‌ ಅಧಿಕಾರಿಗಳನ್ನು ಅಮಾನತು ಮಾಡಿ ವಿಚಾರಣೆ ನಡೆಸಬೇಕು ಎಂದೂ ಅವರು ಆಗ್ರಹಿಸಿದ್ದಾರೆ.

ADVERTISEMENT

‘ಈ ಇಡೀ ಪ್ರಕರಣ ಕಾಂಗ್ರೆಸ್‌ ಪಕ್ಷದ ದೇಶ ಪ್ರೇಮ, ರಾಷ್ಟ್ರ ನಿಷ್ಠೆಗೆ ಒಂದು ಅಗ್ನಿ ಪರೀಕ್ಷೆಯಾಗಿದ್ದು, ಕಾಂಗ್ರೆಸ್‌ ಸರ್ಕಾರದ ನಡೆಯನ್ನು ಕರ್ನಾಟಕ ಮಾತ್ರವಲ್ಲ, ಇಡೀ ದೇಶದ ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.