ಬೆಂಗಳೂರು: ‘ಶಾಸಕ ಎಸ್.ಟಿ.ಸೋಮಶೇಖರ್ ಅವರು ಪಕ್ಷಕ್ಕೆ ದ್ರೋಹ ಬಗೆದಿದ್ದು, ಜನರ ಆಶಯಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಇದು ಪಕ್ಷಾಂತರ ನಿಷೇಧ ಕಾಯ್ದೆ ಅಡಿ ಘೋರ ಅಪರಾಧ’ ಎಂದು ಬಿಜೆಪಿ ಕಾನೂನು ಪ್ರಕೋಷ್ಠದ ಅಧ್ಯಕ್ಷ ಹಾಗೂ ವಕೀಲ ವಿವೇಕ್ ರೆಡ್ಡಿ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಶಾಸಕರಿಗೆ ವಿಪ್ ಜಾರಿ ಮಾಡಿದ್ದಾರೆ. ವಿಪ್ ಜಾರಿ ಬಳಿಕ ಯಾವ ಜನಪ್ರತಿನಿಧಿಯೂ ಅದರ ವಿರುದ್ಧ ಮತದಾನ ಮಾಡಲು ಅಥವಾ ಅಡ್ಡ ಮತದಾನಕ್ಕೆ ಅವಕಾಶವಿಲ್ಲ. ವಿಪ್ ಉಲ್ಲಂಘನೆ ಆಗಿದೆ. ಆದ್ದರಿಂದ ಕೂಡಲೇ ಅವರ ಸದಸ್ಯತ್ವ ಅಮಾನತು ಮಾಡಬೇಕು’ ಎಂದರು.
ಸಭಾಧ್ಯಕ್ಷರು ತೀರ್ಮಾನ ತೆಗೆದುಕೊಳ್ಳಲು ತಡ ಮಾಡಿದರೆ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಲು ಅವಕಾಶವಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.