ADVERTISEMENT

ಪಂಚಾಯತ್ ರಾಜ್ ಇಲಾಖೆಗಳ ಶೀಘ್ರ ವಿಭಜನೆ: ಗೋವಿಂದ ಕಾರಜೋಳ ಸೂಚನೆ

​ಪ್ರಜಾವಾಣಿ ವಾರ್ತೆ
Published 22 ಜೂನ್ 2020, 11:03 IST
Last Updated 22 ಜೂನ್ 2020, 11:03 IST
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ   

ಬೆಂಗಳೂರು: ಲೋಕೋಪಯೋಗಿ ಇಲಾಖೆ, ನೀರಾವರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯನ್ನು ಶೀಘ್ರವಾಗಿ ವಿಭಜಿಸುವಂತೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸೂಚಿಸಿದರು.

ವಿಧಾನಸೌಧದಲ್ಲಿ ಸೋಮವಾರ ಇಲಾಖೆಗಳನ್ನು ವಿಭಜಿಸುವ ಹಿನ್ನೆಲೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಇಲಾಖೆಗಳನ್ನು ವಿಭಜಿಸಲು ಕಳೆದ ಹಲವಾರು ವರ್ಷಗಳಿಂದ ಪ್ರಯತ್ನಿಸಲಾಗುತ್ತಿದೆ. ಇಂಜಿನಿಯರ್‌ಗಳು ಹಾಗೂ ಇಂಜಿನಿಯರಿಂಗ್ ಸಂಘದ ಪದಾಧಿಕಾರಿಗಳ ಅಭಿಪ್ರಾಯವನ್ನು ಪಡೆಯಲಾಗಿದೆ. ಈ ಮೂರು ಇಲಾಖೆಗಳಿಂದಲೂ ಮಾಹಿತಿ ಕ್ರೂಡೀಕರಿಸಲಾಗಿದೆ. ಸಾಧಕ ಬಾಧಕಗಳ ಕುರಿತು ಚರ್ಚಿಸಲಾಗಿದೆ ಎಂದು ಹೇಳಿದರು.

ಇಲಾಖೆಗಳನ್ನು ವಿಭಜಿಸುವ ನಿರ್ಣಯವನ್ನು ಕೈಗೊಳ್ಳಲಾಗಿದೆ. ಇದು ಉತ್ತಮ ನಿರ್ಧಾರವಾಗಿದೆ. ಜಲಸಂಪನ್ಮೂಲ ಸಚಿವರು ಹಾಗೂ ಗ್ರಾಮೀಣಾವೃದ್ಧಿ ಸಚಿವರು ಇಲಾಖೆಗಳನ್ನು ವಿಭಜನೆ ನಿರ್ಣಯಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಶೀಘ್ರವಾಗಿ ವಿಭಜನೆಯ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ.ಎಸ್. ಈಶ್ವರಪ್ಪ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮತ್ತು ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.