ಬೆಂಗಳೂರು: ‘ಪಂಡಿತ ಪಂಚಾಕ್ಷರಿ ಗವಾಯಿಗಳ ಹುಟ್ಟೂರು ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಕಾಡಶೆಟ್ಟಿಹಳ್ಳಿ ಗ್ರಾಮವನ್ನು ಕೇಂದ್ರವಾಗಿಸಿ ಪ್ರಸಕ್ತ ಸಾಲಿನಲ್ಲಿಯೇ ಯಾತ್ರಿ ನಿವಾಸ ಮತ್ತು ಸಂಗೀತ ಶಾಲೆ ಆರಂಭಿಸಲಾಗುವುದು’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದರು.
ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ಸಿನ ಶ್ರೀನಿವಾಸ ಮಾನೆ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ಪಂಡಿತ ಪಂಚಾಕ್ಷರಿ ಗವಾಯಿ ಪ್ರಾಧಿಕಾರ ರಚನೆ ಕುರಿತು ಮುಖ್ಯಮಂತ್ರಿ ಜೊತೆ ಚರ್ಚೆ ನಡೆಸುತ್ತೇನೆ’ ಎಂದೂ ಭರವಸೆ ನೀಡಿದರು.
‘ಅಂಧರು, ಅನಾಥರ ಬೆಳಕಾದ ಗಾನಯೋಗಿ ಪಂಡಿತ ಪಂಚಾಕ್ಷರಿ ಗವಾಯಿಗಳ ಹೆಸರಿನಲ್ಲಿ ಪ್ರಾಧಿಕಾರ ರಚನೆ ಬಗ್ಗೆ ಹಣಕಾಸು ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಕೈಗೊಳ್ಳಲಾಗುವುದು. ಆದರೆ, ಯಾತ್ರಿ ನಿವಾಸ, ಅಂಧಮಕ್ಕಳ ಸಂಗೀತ ತರಬೇತಿ ಆರಂಭಿಸಬೇಕೆಂಬ ಬೇಡಿಕೆಯನ್ನು ಈ ವರ್ಷದ ಆಯವ್ಯಯದಲ್ಲಿಯೇ ಯೋಜನೆ ಸಿದ್ಧಪಡಿಸಿ ಅನುಷ್ಠಾನಗೊಳಿಸಲಾಗುವುದು’ ಎಂದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.