ADVERTISEMENT

ಪಕ್ಷಕ್ಕಾಗಿ ದುಡಿದವರಿಗೆ ಅವಕಾಶ‌ ಕಲ್ಪಿಸಬೇಕು: ಗೃಹ ಸಚಿವ ಜಿ. ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 29 ಮೇ 2024, 16:04 IST
Last Updated 29 ಮೇ 2024, 16:04 IST
<div class="paragraphs"><p>ಜಿ. ಪರಮೇಶ್ವರ</p></div>

ಜಿ. ಪರಮೇಶ್ವರ

   

ಬೆಂಗಳೂರು: ‘ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ನನ್ನ ಹೇಳಿಕೆಯನ್ನು ಯಾರೂ ತಪ್ಪಾಗಿ ಅರ್ಥೈಸಿಕೊಳ್ಳಬೇಕಾದ ಅಗತ್ಯ ಇಲ್ಲ. ಪ್ರಮುಖರ ಜೊತೆ ಸಮಾಲೋಚಿಸಿ ಆಯ್ಕೆ ಮಾಡುವುದು ಪ್ರಕ್ರಿಯೆ. ಕೆಪಿಸಿಸಿ‌ ಅಧ್ಯಕ್ಷನಾಗಿ‌ ಕೆಲಸ ಮಾಡಿದ ಅನುಭವದಿಂದ ಆ‌ ಮಾತು ಹೇಳಿದ್ದೇನೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಯಾರು ಪಕ್ಷಕ್ಕಾಗಿ ದುಡಿದಿದ್ದಾರೋ, ಯಾವ ಸಮುದಾಯ ಪಕ್ಷದ ಜೊತೆ ನಿಂತಿದೆಯೋ ಅಂಥವರಿಗೆ ಅವಕಾಶ‌ ಕಲ್ಪಿಸಬೇಕು. ಪಕ್ಷಕ್ಕಾಗಿ‌ ಕೆಲಸ‌ ಮಾಡಿದವರ ಜೊತೆ, ಸಮಾಲೋಚಿಸಿ ಅಭಿಪ್ರಾಯ ಪಡೆಯಬೇಕೆಂದು ನಾನು ಸಲಹೆ ನೀಡಿದ್ದೇನೆ’ ಎಂದು ಸ್ಪಷ್ಟಪಡಿಸಿದರು‌.

ADVERTISEMENT

‘ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಏಳು ಸ್ಥಾನಗಳು ನಮ್ಮ ಪಕ್ಷಕ್ಕೆ ಬರಲಿವೆ. ಆಯ್ಕೆ ಮಾಡುವುದು ಕಷ್ಟದ ಕೆಲಸ. ಉನ್ನತಮಟ್ಟದ ಸಮಿತಿ ರಚಿಸಿ, ಚರ್ಚಿಸಿದರೆ ಸಲಹೆಗಳು ಬರುತ್ತವೆ. ಆದರೆ, ಆ ಸಮಿತಿ ರಚಿಸುವ ಸಮಯ ಮೀರಿದೆ. ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಮುಖ್ಯಮಂತ್ರಿಯನ್ನು ನಾನು ಭೇಟಿ‌ ಮಾಡಿಲ್ಲ’ ಎಂದೂ ಹೇಳಿದರು.

ತಪ್ಪಿತಸ್ಥರ ಬಂಧನಕ್ಕೆ ಪಕ್ಷವಿಲ್ಲ: ‘ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ಬಂಧನಕ್ಕೆ ಪಕ್ಷ ಎಂಬುದು ಬರುವುದಿಲ್ಲ.‌ ಕಾಂಗ್ರೆಸ್, ಬಿಜೆಪಿ, ಜೆಡಿಎಸ್‌ ಎಂಬುದಕ್ಕಿಂತ, ಈ ಪ್ರಕರಣದಲ್ಲಿ ಯಾರು ಭಾಗಿಯಾಗಿದ್ದಾರೆಂದು ಕಂಡು ಬರುತ್ತದೆಯೋ ಅಂಥವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತದೆ. ಈಗಾಗಲೇ‌ ಪ್ರಕರಣದಲ್ಲಿ 11-12 ಜನರನ್ನು ಬಂಧಿಸಲಾಗಿದೆ’ ಎಂದು ಪರಮೇಶ್ವರ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.