ADVERTISEMENT

ಪರಿಷತ್ ಅಭ್ಯರ್ಥಿ: ಕಾಂಗ್ರೆಸ್‌ ಮಾಜಿ ಸಚಿವರ ಪೈಪೋಟಿ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2024, 16:14 IST
Last Updated 23 ಸೆಪ್ಟೆಂಬರ್ 2024, 16:14 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾಗಿರುವ ವಿಧಾನಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್‌ ಟಿಕೆಟ್‌ಗಾಗಿ ಮಾಜಿ ಸಚಿವರ ನಡುವೆ ಪೈಪೋಟಿ ಏರ್ಪಟ್ಟಿದೆ.

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರೂ ಆಗಿರುವ ವಿನಯ್ ಕುಮಾರ್ ಸೊರಕೆ, ಮಾಜಿ ಸಚಿವ ರಮಾನಾಥ ರೈ ಮತ್ತು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಟಿಕೆಟ್‌ಗಾಗಿ ಬೇಡಿಕೆ ಇಟ್ಟಿದ್ದಾರೆ. ಈ ಪೈಕಿ ಒಬ್ಬರಿಗೆ ಟಿಕೆಟ್‌ ಸಿಗುವ ಸಾಧ್ಯತೆಯಿದೆ ಎನ್ನಲಾಗಿದೆ.

ADVERTISEMENT

ಅಭ್ಯರ್ಥಿ ಆಯ್ಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ. ಚಂದ್ರಶೇಖರ್ ಮತ್ತು ಮಂಜುನಾಥ್ ಭಂಡಾರಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಕೆಪಿಸಿಸಿ ಶಿಫಾರಸು ಮಾಡಲಿರುವ ಹೆಸರುಗಳನ್ನು ಪರಿಶೀಲಿಸಿ, ಪಕ್ಷದ ವರಿಷ್ಠರು ಟಿಕೆಟ್‌ ಅಂತಿಮಗೊಳಿಸಲಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.