ಭಾರತೀನಗರ (ಮಂಡ್ಯ): ಸಮೀಪದ ಕೊಕ್ಕರೆಬೆಳ್ಳೂರು ಪಕ್ಷಿಧಾಮದಲ್ಲಿ ಹೆಜ್ಜಾರ್ಲೆ (ಪೆಲಿಕಾನ್) ಪಕ್ಷಿ ಮಂಗಳವಾರ ಮೃತಪಟ್ಟಿದೆ.
ಸಾವಿಗೆ ಕಾರಣ ತಿಳಿದುಬಂದಿಲ್ಲ. ಕಳೆದ ವರ್ಷ ಜಂತುಹುಳು ಹಾಗೂ ಇನ್ನಿತರ ಕಾರಣಗಳಿಂದ 65 ಪೆಲಿಕಾನ್‌ಗಳು ಸಾವನ್ನಪ್ಪಿದ್ದವು. ಈ ವರ್ಷದ ಆರಂಭದಲ್ಲೇ ಸಾವು ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ. ಮೃತಪಟ್ಟ ಹೆಜ್ಜಾರ್ಲೆಯನ್ನು ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿನ ಪಶುವೈದ್ಯಕೀಯ ಪ್ರಯೋಗಾಲಯಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ರವಾನಿಸಿದ್ದಾರೆ.
ಹೆಜ್ಜಾರ್ಲೆ ಸಾವಿನ ಹಿಂದಿನ ಕಾರಣವನ್ನು ಪತ್ತೆ ಹಚ್ಚಿ, ಹಕ್ಕಿಗಳ ರಕ್ಷಣೆಗೆ ಮುಂದಾಗಬೇಕು ಎಂದು ಹೆಜ್ಜಾರ್ಲೆ ಬಳಗದ ಅಧ್ಯಕ್ಷ ಲಿಂಗೇಗೌಡ ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.