ಬೆಂಗಳೂರು: ನೌಕರರ ವೇತನ ಪರಿಷ್ಕರಣೆಗೆ ರಚಿಸಲಾಗಿದ್ದ ಏಳನೇ ವೇತನ ಆಯೋಗದ ಶಿಫಾರಸುಗಳನ್ನು ತಕ್ಷಣ ಜಾರಿಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ಒತ್ತಾಯಿಸಿದೆ.
70ರಿಂದ 80 ವರ್ಷದ ವಯೋಮಿತಿ ಇರುವ ನಿವೃತ್ತ ನೌಕರರು ಹಾಗೂ ಕುಟುಂಬ ಪಿಂಚಣಿದಾರರಿಗೆ ಶೇ 10ರಷ್ಟು ನಿವೃತ್ತಿವೇತನ, ಮೃತಪಟ್ಟಾಗ ಅಂತಿಮ ಸಂಸ್ಕಾರಕ್ಕಾಗಿ ₹10 ಸಾವಿರ ಮೊತ್ತ ಪಾವತಿಸುವುದೂ ಸೇರಿದಂತೆ ಹಲವು ಶಿಫಾರಸುಗಳನ್ನು ವೇತನ ಆಯೋಗ ಶಿಫಾರಸು ಮಾಡಿದೆ. ನಿವೃತ್ತರಿಗೂ ನಗದು ರಹಿತ ಆರೋಗ್ಯ ಭಾಗ್ಯ ಯೋಜನೆಯನ್ನು ಜಾರಿಗೊಳಿಸಲು ಸಂಘ ಹೋರಾಟ ಮಾಡುತ್ತಾ ಬಂದಿದೆ. ಸಂಘದ ಮನವಿ ಆಲಿಸಿದ್ದ ಆಯೋಗ ‘ಸಂಧ್ಯಾ ಕಿರಣ’ ಯೋಜನೆ ಜಾರಿಗೆ ಶಿಫಾರಸು ಮಾಡಿದೆ. ಈ ಎಲ್ಲ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಸಂಘದ ಅಧ್ಯಕ್ಷ ಎಲ್.ಭೈರಪ್ಪ ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.