ADVERTISEMENT

ವಕ್ಫ್‌ ಅಧ್ಯಕ್ಷ ಚುನಾವಣೆ ಪ್ರಶ್ನಿಸಿದ್ದ ಅರ್ಜಿ ವಜಾ ಮಾಡಿದ ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2023, 16:30 IST
Last Updated 5 ಸೆಪ್ಟೆಂಬರ್ 2023, 16:30 IST
   

ಬೆಂಗಳೂರು: ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸರ್ಕಾರ ಹೊರಡಿಸಿದ್ದ ಅಧಿಸೂಚನೆ ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಬಾಗಲಕೋಟೆ ಜಿಲ್ಲೆಯ ಹುನಗುಂದ ನಿವಾಸಿ ಅಬ್ದುಲ್ ಜಬ್ಬಾರ್ ಕಲಬುರಗಿ ಎಂಬುವರು ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಸರ್ಕಾರದ ಪರ ಅಡ್ವೋಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ಹೆಚ್ಚುವರಿ ಅಡ್ವೊಕೇಟ್ ಜನರಲ್ ಶೇಖ್ ಇಸ್ಮಾಯಿಲ್ ಜಬೀವುಲ್ಲಾ ಹಾಗೂ ವಕ್ಫ್ ಮಂಡಳಿ ಪರ ವಕೀಲೆ ಎಸ್.ಆರ್. ಅನುರಾಧಾ ಮತ್ತು ಅರ್ಜಿದಾರರ ಪರ ವಕೀಲರ ವಾದ–ಪ್ರತಿವಾದ ಆಲಿಸಿದ ನ್ಯಾಯಪೀಠ ‘ಅರ್ಜಿದಾರರು ವಕ್ಫ್ ಮಂಡಳಿಯ ಸದಸ್ಯರಲ್ಲ. ಹಾಗಾಗಿ ಅವರು ಅರ್ಜಿ ಸಲ್ಲಿಸುವ ಹಕ್ಕು ಹೊಂದಿಲ್ಲ‘ ಎಂದು ಹೇಳಿ ಮನವಿಯನ್ನು ತಿರಸ್ಕರಿಸಿತು.

ADVERTISEMENT

ಅಂತೆಯೇ, 2020ರಿಂದ ಖಾಲಿ ಇರುವ ವಕ್ಫ್ ಮಂಡಳಿಯ ಮುತವಲ್ಲಿ ಕೋಟಾದ ಒಂದು ಸದಸ್ಯ ಸ್ಥಾನವನ್ನು ಭರ್ತಿ ಮಾಡುವಂತೆ ಅರ್ಜಿದಾರರು ಆಗಸ್ಟ್ 8ರಂದು ಸಲ್ಲಿಸಿರುವ ಮನವಿಯನ್ನು ಪರಿಗಣಿಸಿ ಎಂದು ಸರ್ಕಾರಕ್ಕೆ ನಿರ್ದೇಶಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.