ADVERTISEMENT

ಅಪಹರಣ ಪ್ರಕರಣ: ಎಚ್.ಡಿ. ರೇವಣ್ಣ ಜಾಮೀನು ಪ್ರಶ್ನಿಸಿದ ಅರ್ಜಿ ವಿಚಾರಣೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 12 ಜುಲೈ 2024, 15:39 IST
Last Updated 12 ಜುಲೈ 2024, 15:39 IST
<div class="paragraphs"><p>ಎಚ್.ಡಿ. ರೇವಣ್ಣ</p></div>

ಎಚ್.ಡಿ. ರೇವಣ್ಣ

   

ಬೆಂಗಳೂರು: 'ಅತ್ಯಾಚಾರ ಆರೋಪ ಪ್ರಕರಣದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರಿಗೆ ವಿಚಾರಣಾ ನ್ಯಾಯಾಲಯ ಮಂಜೂರು ಮಾಡಿರುವ ಜಾಮೀನು ರದ್ದುಗೊಳಿಸಬೇಕು' ಎಂದು ಕೋರಿ ಪ್ರಾಸಿಕ್ಯೂಷನ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮೂರು ವಾರಗಳ ಕಾಲ ಮುಂದೂಡಿದೆ.

ಈ ಕುರಿತಂತೆ ಎಸ್ಐಟಿ ಸಲ್ಲಿಸಿರುವ ಅರ್ಜಿಯನ್ನು, 'ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ'ಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರು ಶುಕ್ರವಾರ ವಿಚಾರಣೆ ನಡೆಸಿ, ಇದೇ 19ಕ್ಕೆ ಮುಂದೂಡಿದರು.

ADVERTISEMENT

ಇದೇ ಪ್ರಕರಣದ ಇತರ ಆರೋಪಿಗಳಾದ ಸತೀಶ್ ಬಾಬು ಅಲಿಯಾಸ್ ಸತೀಶ್ ಬಾಬಣ್ಣ, ಕೆ.ಎ. ರಾಜಗೋಪಾಲ್, ಎಚ್.ಕೆ. ಸುಜಯ್, ಎಚ್‌.ಎನ್‌. ಮಧು, ಎಸ್.ಟಿ.ಕೀರ್ತಿ ಜಾಮೀನು ಕೋರಿ ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನೂ ಇದೇ ನ್ಯಾಯಪೀಠ 19ಕ್ಕೆ ಮುಂದೂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.