ಬೆಂಗಳೂರು: ‘ಮೈಸೂರು-ಕೊಡಗು ಸಂಸದ ಯದುವೀರ ಒಡೆಯರ್ ಅವರ ಆಯ್ಕೆಯನ್ನು ಅಸಿಂಧು ಎಂದು ಘೋಷಿಸಿ, ಈ ಕ್ಷೇತ್ರಕ್ಕೆ ಹೊಸದಾಗಿ ಚುನಾವಣೆ ನಡೆಸಬೇಕು’ ಎಂದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.
‘ಚುನಾವಣಾಧಿಕಾರಿ ನನ್ನ ನಾಮಪತ್ರವನ್ನು ಸೂಕ್ತ ಕಾರಣವಿಲ್ಲದೆ ತಿರಸ್ಕರಿಸಿದ್ದಾರೆ’ ಎಂದು ಆಕ್ಷೇಪಿಸಿ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಅಭ್ಯರ್ಥಿ ಆಕಾಂಕ್ಷಿಯಾಗಿದ್ದ ರೇವತಿ ರಾಜ್ ಅಲಿಯಾಸ್ ಭೀಮಪುತ್ರಿ ರೇವತಿ ರಾಜ್ ಈ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.
ಅರ್ಜಿಯಲ್ಲಿ ಚುನಾವಣಾ ಆಯೋಗ, ಸಂಸದ ಯದುವೀರ ಒಡೆಯರ್ ಹಾಗೂ ಈ ಕ್ಷೇತ್ರದ ಪರಾಜಿತ ಅಭ್ಯರ್ಥಿಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.