ADVERTISEMENT

ಪೆಟ್ರೋಲ್–ಡೀಸೆಲ್ ದರ ಏರಿಕೆ | ಬಿಜೆಪಿಗೆ ಮತ ಹಾಕಿದ್ದಕ್ಕೆ ಸೇಡು: ಅಶೋಕ

​ಪ್ರಜಾವಾಣಿ ವಾರ್ತೆ
Published 15 ಜೂನ್ 2024, 17:52 IST
Last Updated 15 ಜೂನ್ 2024, 17:52 IST
ಆರ್. ಅಶೋಕ 
ಆರ್. ಅಶೋಕ    

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಗೆ ಮತ ಹಾಕಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಜನವಿರೋಧಿ ಕಾಂಗ್ರೆಸ್ ಸರ್ಕಾರ ಹೊರಟಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಟೀಕಿಸಿದ್ದಾರೆ.

ಪೆಟ್ರೋಲ್–ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಕುರಿತು ‘ಎಕ್ಸ್‌’ ಮಾಡಿರುವ ಅವರು, ಅವೈಜ್ಞಾನಿಕ ಗ್ಯಾರಂಟಿಗಳಿಂದ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿರುವ ಕಾಂಗ್ರೆಸ್‌ ಸರ್ಕಾರ ಕನ್ನಡಿಗರ ಮೇಲೆ ತೆರಿಗೆ ಭಾರ ಹೊರಿಸಿ ಖಜಾನೆ ತುಂಬಿಸಲು ಮುಂದಾಗಿದೆ. ದರವನ್ನು ಭಾರಿ ಹೆಚ್ಚಿಸಿ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಿದೆ ಎಂದು ದೂರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT