ADVERTISEMENT

ಪೆಟ್ರೋಲ್, ಡೀಸೆಲ್ ದರ ಏರಿಕೆ: ಕಾಂಗ್ರೆಸ್ ವಿರುದ್ಧ ಶೆಹಜಾದ್ ಪೂನಾವಾಲ ವಾಗ್ದಾಳಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಜೂನ್ 2024, 7:23 IST
Last Updated 16 ಜೂನ್ 2024, 7:23 IST
ಶೆಹಜಾದ್ ಪೂನವಾಲಾ
ಶೆಹಜಾದ್ ಪೂನವಾಲಾ   

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಏರಿಕೆ ಆಗಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ವಕ್ತಾರ ಶೆಹಜಾದ್‌ ಪೂನಾವಾಲ ವಾಗ್ದಾಳಿ ನಡೆಸಿದ್ದಾರೆ.

ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಏರಿಕೆಯು ಕರ್ನಾಟಕ ಕಾಂಗ್ರೆಸ್‌ ಮತ್ತು ಕಾಂಗ್ರೆಸ್‌ ಪಕ್ಷದ ‘ಖಟಾಖಟ್‌’ ಲೂಟಿ ಮಾದರಿಯಾಗಿದೆ. ದೇಶದಲ್ಲಿನ ಮಹಿಳೆಯರ ಖಾತೆಗೆ ₹1 ಲಕ್ಷ ಹಾಕುವ ಬದಲು, ಇವರೇ ಜನಸಾಮಾನ್ಯರ ಹಣವನ್ನು ಕದಿಯುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಲ್ಲಿ ‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆ ಅಡಿಯಲ್ಲಿ ದೇಶದ ಬಡ ಕುಟುಂಬದ ಮಹಿಳೆಯರ ಖಾತೆಗೆ ವರ್ಷಕ್ಕೆ ₹1 ಲಕ್ಷ ಹಾಕುವುದಾಗಿ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು.

ADVERTISEMENT

ಒಂದೆಡೆ ಕಾಂಗ್ರೆಸ್‌ ಪಕ್ಷ ಹಣದುಬ್ಬರದ ಬಗ್ಗೆ ಮಾತನಾಡುತ್ತದೆ. ಆದರೆ, ಮತ್ತೊಂದೆಡೆ ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಹೆಚ್ಚಿಸುವ ಮೂಲಕ ಜನಸಾಮ್ಯಾನ್ಯರಿಗೆ ಹೊರೆಯನ್ನು ನೀಡುತ್ತಿದೆ ಎಂಬ ಪೂನಾವಾಲ ಅವರ ಹೇಳಿಕೆಯನ್ನು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.

ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದ್ದು, ಇದರಿಂದಾಗಿ ಪೆಟ್ರೋಲ್‌ ದರ ಪ್ರತಿ ಲೀಟರ್‌ಗೆ ₹3.02ರಷ್ಟು ಹಾಗೂ ಡೀಸೆಲ್‌ ದರ ಲೀಟರ್‌ಗೆ ₹3ರಷ್ಟು ಹೆಚ್ಚಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.