ADVERTISEMENT

ಜುಲೈ 13, 14ಕ್ಕೆ ಪಿಜಿ-ಸಿಇಟಿ ಪರೀಕ್ಷೆ 

​ಪ್ರಜಾವಾಣಿ ವಾರ್ತೆ
Published 23 ಮೇ 2024, 15:20 IST
Last Updated 23 ಮೇ 2024, 15:20 IST
<div class="paragraphs"><p>ಪರೀಕ್ಷೆ</p></div>

ಪರೀಕ್ಷೆ

   

ಬೆಂಗಳೂರು: 2024-25ನೇ ಸಾಲಿನ ಸ್ನಾತಕೋತ್ತರ ಕೋರ್ಸುಗಳ (ಎಂ.ಬಿ.ಎ., ಎಂ.ಸಿ.ಎ., ಎಂ.ಟೆಕ್, ಎಂ.ಇ., ಎಂ.ಆರ್ಕಿಟೆಕ್ಚರ್) ಪ್ರವೇಶಕ್ಕೆ ಜುಲೈ 13 ಮತ್ತು 14ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಪಿಜಿ-ಸಿಇಟಿ) ನಡೆಯಲಿದೆ.

ಎಂ.ಇ, ಎಂ.ಟೆಕ್, ಎಂ.ಆರ್ಕಿಟೆಕ್ಚರ್‌ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ಜುಲೈ 13 ಹಾಗೂ ಎಂ.ಸಿ.ಎ ಮತ್ತು ಎಂ.ಬಿ.ಎ. ಕೋರ್ಸ್‌ಗಳ ಪ್ರವೇಶ ಪರೀಕ್ಷೆಯನ್ನು ಜುಲೈ 14ರಂದು ನಡೆಯಲಿದೆ. ಮೇ 27ರಿಂದ ಜೂನ್‌ 17ರವರೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಜೂನ್ 18ರೊಳಗೆ ಶುಲ್ಕ ಪಾವತಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.

ADVERTISEMENT

ಗೇಟ್ (ಜಿಎಟಿಇ) ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಪಿಜಿ–ಸಿಇಟಿಗೆ ಹಾಜರಾಗುವ ಅಗತ್ಯವಿಲ್ಲ. ಆದರೆ, ಅಂತಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿ, ಪ್ರವೇಶಕ್ಕೆ ಅರ್ಹರಾಗಬೇಕಾಗುತ್ತದೆ. ಗೇಟ್‌ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದಲ್ಲೇ ಸ್ನಾತಕೋತ್ತರ ಕೋರ್ಸ್‌ಗಳಿಗೆ ಪ್ರವೇಶ ನೀಡಲಾಗುತ್ತದೆ ಎಂದು ವಿವರ ನೀಡಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.