ಬೆಂಗಳೂರು: ಸ್ನಾತಕೋತ್ತರ ದಂತ ವೈದ್ಯಕೀಯ (ಎಂಡಿಎಸ್) ಕೋರ್ಸ್‌ನ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆ.3ರಿಂದ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.
ಮೊದಲನೇ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿ ಶುಲ್ಕ ಪಾವತಿಸಿರುವವರು, ಯಾವುದೇ ಸೀಟು ಹಂಚಿಕೆಯಾಗದೇ ಇರುವವರು ಆ.3ರಿಂದ ಕೆಇಎ ಕಚೇರಿಯಲ್ಲಿ ತಮ್ಮ ಎಲ್ಲ ಮೂಲ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ದಾಖಲೆ ಸಲ್ಲಿಸದಿದ್ದರೆ ಅಂತಹವರಿಗೆ ಸೀಟು ಹಂಚಿಕೆ ಮಾಡಲಾಗುವುದಿಲ್ಲ. ಎರಡನೇ ಸುತ್ತಿನ ಸೀಟು ಹಂಚಿಕೆಗೆ ಆ.3ರಂದು ಸೀಟ್ ಮ್ಯಾಟ್ರಿಕ್ಸ್ ಪ್ರಕಟಿಸಲಾಗುತ್ತದೆ. ಆ.4ರಿಂದ 6ರವರೆಗೆ ಆಯ್ಕೆಗಳನ್ನು ದಾಖಲಿಸಲು ಸಮಯ ನೀಡಲಾಗುತ್ತದೆ. ಆ.7ರಂದು ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಹಾಗೂ ಆ.8ರಂದು ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಕಾಲೇಜಿಗೆ ವರದಿ ಮಾಡಿಕೊಳ್ಳಲು ಆ.13 ಕೊನೆ ದಿನ ಎಂದು ಕೆಇಎ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.