ಬೆಂಗಳೂರು: ರಾಷ್ಟ್ರೀಯ ವಿಜ್ಞಾನ ದಿನವಾದ ಫೆ.28ರಂದು ರಾಜ್ಯದ ಎಲ್ಲ ಶಾಲೆಗಳಲ್ಲಿ ವೈಜ್ಞಾನಿಕ ಮನೋಭಾವ ಹಾಗೂ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವ ಕುರಿತು ವಿದ್ಯಾರ್ಥಿಗಳು ಏಕಕಾಲಕ್ಕೆ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ.
ವಿಜ್ಞಾನ ತಂತ್ರಜ್ಞಾನ ಸಚಿವ ಎಸ್.ಎನ್.ಬೋಸರಾಜು, ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಟಿಪ್ಪಣಿಯಂತೆ ಶಿಕ್ಷಣ ಇಲಾಖೆ ಆಯುಕ್ತೆ ಬಿ.ಬಿ.ಕಾವೇರಿ ಅವರು ಸುತ್ತೋಲೆ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಸಂವಿಧಾನದ ಆಶಯಗಳನ್ನು ವಿದ್ಯಾರ್ಥಿಗಳು ಅರ್ಥ ಮಾಡಿಕೊಂಡರೆ ಸಾಮಾಜಿಕ ಸಾಮರಸ್ಯ ಸಹಜವಾಗಿ ಅರಳುತ್ತದೆ ಎಂಬುದಕ್ಕೆ ಒತ್ತು ನೀಡಿ ಶಾಲಾ–ಕಾಲೇಜುಗಳಲ್ಲಿ ಸಂವಿಧಾನದ ಪ್ರಸ್ತಾವನೆ ಓದಿಗೆ ಆದೇಶಿಸಿತ್ತು.
ಎಲ್ಲ ಶಿಕ್ಷಣ ಸಂಸ್ಥೆಗಳನ್ನೂ ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಹಾಗೂ ಸಹ ಬಾಳ್ವೆಯ ಕೇಂದ್ರಗಳಾಗಿ ರೂಪಿಸಲು ‘ನಾವು ಮನುಜರು’ ಎಂಬ ಕಾರ್ಯಕ್ರಮವನ್ನು ಬಜೆಟ್‌ನಲ್ಲಿ ಘೋಷಿಸಿದೆ. ಈಗ ವಿಜ್ಞಾನದ ದಿನ ಏಕಲಾಲಕ್ಕೆ ಎಲ್ಲ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಹಾಗೂ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವ ಪ್ರತಿಜ್ಞಾವಿಧಿ ಸ್ವೀಕರಿಸಲು ಸೂಚಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.