ADVERTISEMENT

ಬೆಂಗಳೂರು ಕಟ್ಟಡ ಕುಸಿತ: ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಮೋದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಅಕ್ಟೋಬರ್ 2024, 5:36 IST
Last Updated 24 ಅಕ್ಟೋಬರ್ 2024, 5:36 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ಬೆಂಗಳೂರು: ಬಾಬು ಸಾ ಪಾಳ್ಯದಲ್ಲಿ ಕುಸಿದ ಕಟ್ಟಡದ ಅಡಿ ಸಿಲುಕಿ ಮೃತಪಟ್ಟವರ ಕುಟುಂಬದವರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ(ಪಿಎಂಎನ್‌ಆರ್‌ಎಫ್) ತಲಾ ₹2 ಲಕ್ಷ ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

‘ಬೆಂಗಳೂರಿನ ಕಟ್ಟಡ ಕುಸಿತ ದುರಂತದಲ್ಲಿ ಹಲವು ಜೀವಹಾನಿಯಾಗಿರುವುದನ್ನು ಕೇಳಿ ಬಹಳ ನೋವಾಗಿದೆ. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಮೃತರ ಸಂಬಂಧಿಕರಿಗೆ ಪಿಎಂಎನ್‌ಆರ್‌ಎಫ್‌ನಿಂದ ತಲಾ ₹2 ಲಕ್ಷ, ಗಾಯಾಳುಗಳಿಗೆ ತಲಾ ₹50,000 ಪರಿಹಾರ ನೀಡಲಾಗುವುದು ’ಎಂದು ಪ್ರಧಾನಿ ಕಾರ್ಯಾಲಯವು ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದೆ.

ಬೆಂಗಳೂರಿನ ಹೆಣ್ಣೂರು ಬಳಿಯ ಬಾಬು ಸಾ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದ ಪರಿಣಾಮ 8 ಮಂದಿ ಮೃತಪಟ್ಟಿದ್ದಾರೆ. 13 ಜನರನ್ನು ರಕ್ಷಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.