ನವದೆಹಲಿ: ಪ್ರಧಾನಮಂತ್ರಿ ಗತಿಶಕ್ತಿ ಉಪಕ್ರಮದ ಅಡಿಯಲ್ಲಿ ನೆಟ್‌ವಕ್ ಪ್ಲಾನಿಂಗ್ ಗ್ರೂಪ್‌ನ (ಎನ್‌ಪಿಜಿ) 78ನೇ ಸಭೆ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜಿಸುವ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ರಾಜೀವ್ ಸಿಂಗ್ ಠಾಕೂರ್ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು.
ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಪ್ರಸ್ತಾಪಿಸಿದ ರಸ್ತೆ ಮೂಲಸೌಕರ್ಯದ 18 ಯೋಜನೆಗಳ ಮೌಲ್ಯಮಾಪನ ನಡೆಸಿತು. ಇದರಲ್ಲಿ ಬೆಳಗಾವಿ ರಿಂಗ್ ರಸ್ತೆ (75.39 ಕಿ.ಮೀ) ಹಾಗೂ ತುಮಕೂರು ಬೈಪಾಸ್ ರಸ್ತೆ ಯೋಜನೆಗಳು ಸೇರಿವೆ. ಈ ಯೋಜನೆಗಳು ವಿವಿಧ ಸಾರಿಗೆ ವಿಧಾನಗಳನ್ನು ಸಂಯೋಜಿಸುವ ಮೂಲಕ ಮತ್ತು ಗಣನೀಯ ಸಾಮಾಜಿಕ-ಆರ್ಥಿಕ ಪ್ರಯೋಜನಗಳನ್ನು ಒದಗಿಸುವ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಲಿವೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.