ನವದೆಹಲಿ: ಖ್ಯಾತ ಭಾಷಾ ತಜ್ಞ ಪ್ರೊ.ಜಿ ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಪ್ರೊ. ಜಿ.ವೆಂಕಟಸುಬ್ಬಯ್ಯ ಅವರ ನಿಧನವು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ದೊಡ್ಡ ನಿರ್ವಾತ ಸೃಷ್ಟಿಸಿದೆ. ಖ್ಯಾತ ಬರಹಗಾರ ಮತ್ತು ಚಿಂತಕರಾಗಿರುವ ಅವರು ಕನ್ನಡವನ್ನು ಜನಪ್ರಿಯಗೊಳಿಸಲು ಅನೇಕ ಪ್ರಯತ್ನಗಳನ್ನು ಮಾಡಿದ್ದರು. ತಮ್ಮ ಕೆಲಸದ ಬಗ್ಗೆ ಸದಾ ಒಲವು ಹೊಂದಿದ್ದ ಅವರು ಅನೇಕ ಯುವಕರಿಗೆ ಸ್ಫೂರ್ತಿಯಾಗಿದ್ದರು. ಓಂ ಶಾಂತಿ’ ಎಂದು ಉಲ್ಲೇಖಿಸಿದ್ದಾರೆ.
ವೆಂಕಟಸುಬ್ಬಯ್ಯ ಅವರು ಭಾನುವಾರ ತಡರಾತ್ರಿ 1.15ಕ್ಕೆ ವಯೋಸಹಜ ಕಾರಣದಿಂದ ನಿಧನರಾಗಿದ್ದರು. ಅವರು ಕನ್ನಡದ ನಿಘಂಟುಶಾಸ್ತ್ರ, ಪ್ರಾಚೀನ ಸಾಹಿತ್ಯ ಅಧ್ಯಯನ, ಅನುವಾದ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.