ADVERTISEMENT

ಕಿಸಾನ್‌ ಸಮ್ಮಾನ್‌ ಅಡಿ ರಾಜ್ಯದ 55 ಲಕ್ಷ ರೈತರಿಗೆ ₹985.61 ಕೋಟಿ: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 14 ಮೇ 2021, 14:29 IST
Last Updated 14 ಮೇ 2021, 14:29 IST
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ   

ಬೆಂಗಳೂರು: ‘ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ’ (ಪಿಎಂ–ಕಿಸಾನ್‌) ಯೋಜನೆಯ 8ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬಿಡುಗಡೆ ಮಾಡಿದ್ದು, ರಾಜ್ಯದ 55 ಲಕ್ಷಕ್ಕೂ ಹೆಚ್ಚು ರೈತರಿಗೆ ಪ್ರಯೋಜನವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ರಾಜ್ಯದ 55 ಲಕ್ಷಕ್ಕೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ ಒಟ್ಟು ₹985.61 ಕೋಟಿ ಮೊತ್ತ ನೇರ ವರ್ಗಾವಣೆಯಾಗಿದೆ’ ಎಂದು ಉಲ್ಲೇಖಿಸಿದ್ದಾರೆ.

ಪ್ರಧಾನಿಯವರು ಸುಮಾರು ₹20 ಸಾವಿರ ಕೋಟಿ ಮೊತ್ತ ಬಿಡುಗಡೆ ಮಾಡಿದ್ದು, ದೇಶದ 9.5 ಕೋಟಿಗೂ ಹೆಚ್ಚು ರೈತರಿಗೆ ಪ್ರಯೋಜನ ದೊರೆತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.