ADVERTISEMENT

ಶಿರೂರು ಗುಡ್ಡ ಕುಸಿತ: ಸಂತ್ರಸ್ತರಿಗೆ ಪರಿಹಾರ ನೀಡಲು ಪ್ರಧಾನಿ ಮೋದಿ ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2024, 6:09 IST
Last Updated 23 ಆಗಸ್ಟ್ 2024, 6:09 IST
<div class="paragraphs"><p>ಶಿರೂರು ಗುಡ್ಡ ಕುಸಿತ</p></div>

ಶಿರೂರು ಗುಡ್ಡ ಕುಸಿತ

   

- ಪ್ರಜಾವಾಣಿ ಚಿತ್ರ

ಬೆಂಗಳೂರು: ಶಿರೂರು ಗುಡ್ಡ ಕುಸಿತದ ಸಂತ್ರಸ್ತರಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರ ಒಪ್ಪಿದೆ.

ADVERTISEMENT

ಶಿರೂರು ಗುಡ್ಡ ಕುಸಿತದ ಸಂತ್ರಸ್ತರಿಗೆ ಪರಿಹಾರ ನೀಡಬೇಕು ಎಂದು ಕೋರಿ ಉತ್ತರ ಕನ್ನಡ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಬರೆದಿರುವ ಪತ್ರಕ್ಕೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಶಿರೂರಿನಲ್ಲಿ ಭಾರಿ ಮಳೆಯಿಂದಾಗಿ ಸಂತ್ರಸ್ತರಾಗಿರುವ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ವಿಶೇಷ ಅನುದಾನ ನೀಡಬೇಕು ಎಂದು ಕೋರಿ ನೀವು ಬರೆದ ಪತ್ರ ನನಗೆ ತಲುಪಿದೆ. ವಿಶೇಷ ಅನುದಾನ ರೂಪದಲ್ಲಿ ಪರಿಹಾರ ಬಿಡುಗಡೆಯಾಗಲಿದೆ’ ಎಂದು ಹೇಳಿದ್ದಾರೆ.

ಪ್ರಧಾನಿ ಬರೆದ ಪತ್ರ

ಅಲ್ಲದೆ, ನಮ್ಮ ಸರ್ಕಾರದಿಂದ ಎಲ್ಲಾ ಬೆಂಬಲ ಸಿಗಲಿದೆ. ಘಟನೆಯಿಂದ ಭಾದಿತರಾದವರ ಜೊತೆ ನನ್ನ ಪ್ರಾರ್ಥನೆ ಇರಲಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪರಿಹಾರ ನೀಡಲು ಪ್ರಧಾನಿ ಒಪ್ಪಿದ್ದು, ಜಿಲ್ಲಾಧಿಕಾರಿಗಳಿಂದ ವರದಿ ತರಿಸಿಕೊಂಡು ಪರಿಹಾರ ಮೊತ್ತ ನಿಗದಿ ಆಗಲಿದೆ ಎಂದು ತಿಳಿದು ಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.