ADVERTISEMENT

ದೇವೇಗೌಡ ದಂಪತಿಗೆ ಕೋವಿಡ್ ಸೋಂಕು: ಕರೆಮಾಡಿ ವಿಚಾರಿಸಿದ ಪ್ರಧಾನಿ ಮೋದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 31 ಮಾರ್ಚ್ 2021, 9:09 IST
Last Updated 31 ಮಾರ್ಚ್ 2021, 9:09 IST
ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ
ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ   

ಬೆಂಗಳೂರು: ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್‌ ಡಿ ದೇವೇಗೌಡರಿಗೆ ಕೋವಿಡ್ ಸೋಂಕು ತಗುಲಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲದೆ, ದೇವೇಗೌಡರ ಪತ್ನಿ ಚೆನ್ನಮ್ಮ ಅವರಿಗೂ ಕೋವಿಡ್ ತಗುಲಿದ್ದು, ಅವರಿಗೆ ಮನೆಯಲ್ಲೇ ಚಿಕಿತ್ಸೆ ಕೊಡಿಸಲಾಗುತ್ತಿದೆ.

ದೇವೇಗೌಡ ದಂಪತಿ ಕೋವಿಡ್ ಸೋಂಕಿಗೆ ತುತ್ತಾಗಿರುವ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ನರೇಂದ್ರ ಮೋದಿ, ಕೂಡಲೇ ದೇವೇಗೌಡರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಅಲ್ಲದೆ, ಚೆನ್ನಮ್ಮ ಅವರ ಆರೋಗ್ಯದ ಬಗ್ಗೆಯೂ ಮೋದಿ ಕೇಳಿ ತಿಳಿದುಕೊಂಡಿದ್ದಾರೆ, ಇಬ್ಬರೂ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ADVERTISEMENT

ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಮಾಜಿ ಪ್ರಧಾನಿ ದೇವೇಗೌಡರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದೇನೆ, ಅವರಿಬ್ಬರೂ ಶೀಘ್ರ ಚೇತರಿಸಿಕೊಳ್ಳಲಿ ಎಂದು ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.