ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಬುಧವಾರ) ಬೆಂಗಳೂರಿನಲ್ಲಿ ಭಾರತ ಇಂಧನ ಸಪ್ತಾಹ–2023ಕ್ಕೆ ಚಾಲನೆ ನೀಡಿದ್ದಾರೆ.
ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಫೆ.6ರಿಂದ 8ರವರೆಗೆ ಇಂಧನ ಸಪ್ತಾಹ ಆಯೋಜಿಸಲಾಗುತ್ತಿದೆ.
ಇದನ್ನೂ ಓದಿ: ತುಮಕೂರು: ಪ್ರಧಾನಿ ಮೋದಿ ಸ್ವಾಗತಕ್ಕೆ ಸಿದ್ಧತೆ
ಭಾರತ ಇಂಧನ ಸಪ್ತಾಹದಲ್ಲಿ 30 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು, 500ಕ್ಕೂ ಹೆಚ್ಚು ಸಂಪನ್ಮೂಲ ವ್ಯಕ್ತಿಗಳು ಭಾರತದ ಇಂಧನ ಭವಿಷ್ಯ ಕುರಿತ ಸವಾಲುಗಳು ಮತ್ತು ಅವಕಾಶಗಳ ಬಗ್ಗೆ ಚರ್ಚಿಸಲಿದ್ದಾರೆ.
ಇದಕ್ಕೂ ಮೊದಲು ಬೆಂಗಳೂರಿಗೆ ಆಮಿಸಿದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾತಿಸಿದರು.
ಇಂದು ಮಧ್ಯಾಹ್ನ 3ಕ್ಕೆ ಪ್ರಧಾನಿ ಅವರು ತುಮಕೂರಿನಲ್ಲಿ ಎಚ್ಎಎಲ್ ಹೆಲಿಕಾಪ್ಟರ್ ಕಾರ್ಖಾನೆಯನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.