ADVERTISEMENT

‘ಮನೆಗೆಲಸದ ಹೆಣ್ಣುಮಗಳು’ ಕವಿತೆ ವಾಪಸ್ ಪಡೆದ ಎಸ್‌ಜಿ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 31 ಮೇ 2022, 3:37 IST
Last Updated 31 ಮೇ 2022, 3:37 IST
ಕವಿ ಎಸ್.ಜಿ. ಸಿದ್ದರಾಮಯ್ಯ
ಕವಿ ಎಸ್.ಜಿ. ಸಿದ್ದರಾಮಯ್ಯ   

ಬೆಂಗಳೂರು: ಪಠ್ಯ ಪುಸ್ತಕದಲ್ಲಿ ತಮ್ಮ ಕವಿತೆಯನ್ನು ಬೋಧಿಸಲು ನೀಡಿದ್ದ ಅನುಮತಿಯನ್ನು ಕವಿ ಎಸ್.ಜಿ. ಸಿದ್ದರಾಮಯ್ಯ ಅವರೂ ವಾಪಸ್ ಪಡೆದಿದ್ದಾರೆ.

ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯನ್ನು ವಿರೋಧಿಸಿಜಿ.ರಾಮಕೃಷ್ಣ ಹಾಗೂ ದೇವನೂರ ಮಹದೇವ ಅವರು ತಾವು ನೀಡಿದ್ದ ಅನುಮತಿಯನ್ನು ಹಿಂತೆಗೆದುಕೊಂಡಿದ್ದರು. ಈ ಸಾಲಿಗೆ ಸೇರಿರುವ ಸಿದ್ದರಾಮಯ್ಯ ಅವರು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರಿಗೆ ಸೋಮವಾರ ಪತ್ರ ಬರೆದಿದ್ದಾರೆ.

‘ಮನೆಗೆಲಸದ ಹೆಣ್ಣುಮಗಳು’ ಎಂಬ ನನ್ನ ಕವಿತೆ 9ನೇ ತರಗತಿಯ ದ್ವಿತೀಯ ಭಾಷಾ ಪಠ್ಯವಾಗಿ ಸೇರಿದೆ. ಅದನ್ನು ಬೋಧಿಸಲು ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದೇನೆ‘ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.