ADVERTISEMENT

ವಿಧಾನ ಪರಿಷತ್ ಚುನಾವಣೆ: ಮತದಾರರಿಗೆ ರಜೆ

​ಪ್ರಜಾವಾಣಿ ವಾರ್ತೆ
Published 31 ಮೇ 2024, 14:08 IST
Last Updated 31 ಮೇ 2024, 14:08 IST
   

ಬೆಂಗಳೂರು: ಇದೇ 3 ರಂದು ನಡೆಯುವ ವಿಧಾನಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತಗಳ ಚುನಾವಣೆಯ ಕಾರಣ ಅರ್ಹ ಮತದಾರರಿಗಷ್ಟೇ ಸೀಮಿತವಾಗಿ ಮತದಾನ ಮಾಡಲು ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈಶಾನ್ಯ ಪದವೀಧರರ ಕ್ಷೇತ್ರ, ನೈರುತ್ಯ ಪದವೀಧರರ ಕ್ಷೇತ್ರ, ಬೆಂಗಳೂರು ಪದವೀಧರರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಈ ಕ್ಷೇತ್ರದ ವ್ಯಾಪ್ತಿಗೆ ಬರುವ ಜಿಲ್ಲೆಗಳಲ್ಲಿನ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಿಗೆ ಈ ಆದೇಶ ಅನ್ವಯವಾಗಲಿದೆ.

ಇಲ್ಲಿನ ಸರ್ಕಾರಿ, ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಮತ್ತು ಅನುದಾನ ರಹಿತ ವಿದ್ಯಾಸಂಸ್ಥೆಗಳು, ಎಲ್ಲ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಚೇರಿಗಳು, ಕೈಗಾರಿಕಾ ಸಂಸ್ಥೆಗಳು, ಸಹಕಾರ ರಂಗದ ಸಂಘ ಸಂಸ್ಥೆಗಳಲ್ಲಿ ಕಾಯಂ ಅಥವಾ ದಿನಗೂಲಿ ಆಧಾರದಲ್ಲಿ ಕೆಲಸ ಮಾಡುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ವಿಶೇಷ ಸಾಂದರ್ಭಿಕ ರಜೆ ನೀಡುವಂತೆ ನಿರ್ದೇಶನ ನೀಡಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.