ADVERTISEMENT

ಹೆಚ್ಚಿನ ಮನವಿ ಬಂದರೆ ಪಿಎಸ್‌ಐ ಪರೀಕ್ಷೆ ಮುಂದೂಡಿಕೆ: ಸಚಿವ ಜಿ.ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2024, 15:10 IST
Last Updated 30 ಆಗಸ್ಟ್ 2024, 15:10 IST
ಜಿ.ಪರಮೇಶ್ವರ
ಜಿ.ಪರಮೇಶ್ವರ   

ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯ ದಿನವೇ (ಸೆ.22) ಯುಪಿಎಸ್‌ಸಿ ಪರೀಕ್ಷೆಯೂ ನಡೆಯುತ್ತಿದೆ. ಒಂದು ವೇಳೆ ಪರೀಕ್ಷೆ ಮುಂದೂಡಿಕೆಗೆ ಹೆಚ್ಚಿನ ಮನವಿಗಳು ಬಂದರೆ ಮುಂದೂಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸುವುದಾಗಿ ತಿಳಿಸಿದರು.

‘ಈ ಹಿಂದೆ ಗೃಹ ಸಚಿವನಾಗಿದ್ದಾಗ ಯಾವುದೇ ಅಡೆತಡೆಗಳಿಲ್ಲದೇ ಸಾವಿರಾರು ಹುದ್ದೆಗಳ ನೇಮಕಾತಿ ಸುಲಭವಾಗಿ ನಡೆದಿತ್ತು. ಹಿಂದಿನ ಸರ್ಕಾರದ ಅವಧಿಯಲ್ಲಿ ಪಿಎಸ್‌ಐ ಪರೀಕ್ಷಾ ಹಗರಣ ನಡೆದ ಕಾರಣ ನೇಮಕಾತಿ ತಡವಾಗಿದೆ. ಆದಷ್ಟು ಬೇಗನೇ ಫಲಿತಾಂಶ ಪ್ರಕಟಿಸಲು ಕ್ರಮ ತೆಗೆದುಕೊಳ್ಳಲಾಗುವುದು’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.