ಬೆಂಗಳೂರು: ವಾಸ್ತವ್ಯ ಪ್ರಮಾಣ ಪತ್ರದ ಅಗತ್ಯವಿಲ್ಲದೇ, ಮನೆ, ನಿವೇಶನ, ಬಡಾವಣೆ ಮತ್ತು ಕೈಗಾರಿಕಾ ಘಟಕಗಳಿಗೆ ಅವುಗಳ ಬೇಡಿಕೆಯನ್ನು ಆಧರಿಸಿ ವಿದ್ಯುತ್ ಸಂಪರ್ಕ ಕಲ್ಪಿಸುವ ಸಂಬಂಧ ಕೆಇಆರ್‌ಸಿ ಅಧಿಸೂಚನೆಯನ್ನು ಹೊರಡಿಸಿದೆ.
ಈ ಹಿಂದೆ ವಿದ್ಯುತ್ ಸಂಪರ್ಕ ಪಡೆಯಲು ಕಟ್ಟಡ ಯೋಜನಾ (ಪ್ಲಾನ್) ಅನುಮೋದನೆ ಪಡೆಯುವುದು ಅಗತ್ಯವಿತ್ತು. ಇನ್ನು ಮುಂದೆ ಅದರ ಅಗತ್ಯವಿಲ್ಲ. ಈಗ ಇರುವ ಏಕೈಕ ಷರತ್ತು ಎಂದರೆ, ಅರ್ಜಿ ಸಲ್ಲಿಸುವ ವ್ಯಕ್ತಿ ಕಟ್ಟಡದ ಮಾಲೀಕನಾಗಿರಬೇಕು ಅಥವಾ ಮನೆಯಲ್ಲಿರಬೇಕು ಎಂದು ನಿಯಮಾವಳಿಗೆ ತಿದ್ದುಪಡಿ ಮಾಡಲಾಗಿದೆ.
ವಾಸ್ತವ್ಯ ಪ್ರಮಾಣ ಪತ್ರ (ಓಸಿ) ನೀಡದ ಕಾರಣಕ್ಕೆ ವಿದ್ಯುತ್ ಸಂಪರ್ಕ ನೀಡಲು ನಿರಾಕರಿಸಲಾಗುತ್ತಿತ್ತು. ಅದರಲ್ಲೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮಸ್ಯೆಯಾಗಿ ಪರಿಣಮಿಸಿತ್ತು. ‘ಬೆಳಕು’ ಯೋಜನೆಯಡಿ ಸಂಪರ್ಕ ಕಲ್ಪಿಸಲು ಸರ್ಕಾರ ಮುಂದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.