ಬೆಂಗಳೂರು: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದ ವಿವಿಧ ಪ್ರಕರಣಗಳಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ಕೋರ್ಟ್ ಇದೇ 22ಕ್ಕೆ ಮುಂದೂಡಿದೆ.
ಈ ಸಂಬಂಧ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ (ಸಿಸಿಎಚ್–82) ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ಗುರುವಾರ ವಿಚಾರಣೆ ನಡೆಸಿದರು. ಕಲಾಪ ಅವಧಿಯಲ್ಲಿ ಸಮಯದ ಕೊರತೆ ಇದ್ದ ಕಾರಣ ನ್ಯಾಯಾಧೀಶರು ವಿಚಾರಣೆಯನ್ನು ಇದೇ 22ಕ್ಕೆ ಮುಂದೂಡಿ ಆದೇಶಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.