ADVERTISEMENT

ಪ್ರಜ್ವಲ್ ರೇವಣ್ಣ ಅನರ್ಹ: ಕರ್ನಾಟಕ ಹೈಕೋರ್ಟ್‌ ತೀರ್ಪಿಗೆ ಸುಪ್ರೀಂ ಕೋರ್ಟ್‌ ತಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಸೆಪ್ಟೆಂಬರ್ 2023, 12:26 IST
Last Updated 18 ಸೆಪ್ಟೆಂಬರ್ 2023, 12:26 IST
<div class="paragraphs"><p>ಪ್ರಜ್ವಲ್ ರೇವಣ್ಣ</p></div>

ಪ್ರಜ್ವಲ್ ರೇವಣ್ಣ

   

ನವದೆಹಲಿ: ಹಾಸನ ಲೋಕಸಭಾ ಕ್ಷೇತ್ರದ ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಹಾಸನ ಕ್ಷೇತ್ರದಿಂದ ಸಂಸದರಾಗಿ ಪ್ರಜ್ವಲ್ ರೇವಣ್ಣ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಕೆ. ನಟರಾಜನ್ ಅವರ ಪೀಠ ಸೆ.1ರಂದು ತೀರ್ಪು ನೀಡಿ, ಅದರ ಪ್ರತಿಯನ್ನು ಲೋಕಸಭೆ ಸ್ಪೀಕರ್‌ಗೆ ಕಳುಹಿಸಲು ರಿಜಿಸ್ಟ್ರಿಗೆ ನಿರ್ದೇಶಿಸಿತ್ತು.

ADVERTISEMENT

ಸೆ.4ರಂದು ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದ ಪ್ರಜ್ವಲ್, ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವವರೆಗೆ ಅಸಿಂಧು ಆದೇಶಕ್ಕೆ ತಡೆ ನೀಡುವಂತೆ ಕೋರಿದ್ದರು. ಅದನ್ನು ಹೈಕೋರ್ಟ್‌ ವಜಾಮಾಡಿತ್ತು. ಹೀಗಾಗಿ ಪ್ರಜ್ವಲ್ ರೇವಣ್ಣ ಸುಪ್ರೀಂ ಕೋರ್ಟ್‌ ಮೆಟ್ಟಲೇರಿದ್ದರು.

ಸದ್ಯ ಅನರ್ಹತೆಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಪ್ರಜ್ವಲ್ ರೇವಣ್ಣಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ಚುನಾವಣೆಯಲ್ಲಿ ಅಕ್ರಮ ಎಸಗಿದ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಅವರನ್ನು ಸಂಸದ ಸ್ಥಾನದಿಂದ ಹೈಕೋರ್ಟ್‌ ವಜಾಗೊಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.