ಬೆಂಗಳೂರು: ಅತ್ಯಾಚಾರದ ಆರೋಪದಡಿ ಎಸ್‌ಐಟಿ ಕಸ್ಟಡಿಯಲ್ಲಿರುವ ಮಾಜಿ ಸಂಸದ ಪ್ರಜ್ವಲ್ ಅವರನ್ನು ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೂನ್10ರವರೆಗೆ ಪುನಃ ಪೊಲೀಸ್ ಕಸ್ಟಡಿಗೆ ನೀಡಿದೆ.
ಈ ಮೊದಲು ನೀಡಿದ್ದ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯಗೊಂಡಿದ್ದ ಕಾರಣ ಆರೋಪಿ ಪ್ರಜ್ವಲ್ ಅವರನ್ನು ಗುರುವಾರ ಮಧ್ಯಾಹ್ನ 3 ಗಂಟೆಗೆ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.
ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ವಕೀಲ ಅಶೋಕ್ ನಾಯಕ್ ಅವರು ಆರೋಪಿಯ ಕಸ್ಟಡಿ ವಿಸ್ತರಿಸುವಂತೆ ಮಾಡಿದ ಮನವಿಯನ್ನು ಎಸಿಎಂಎಂ 42ನೇ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಮನ್ನಿಸಿ ಈ ಕುರಿತಂತೆ ಆದೇಶಿಸಿದರು.
ಆರೋಪಿ ಪರ ಹೈಕೋರ್ಟ್ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.