ಮೈಸೂರು: ‘ಕೋವಿಡ್ ಸಂದರ್ಭವನ್ನು ಸಮರ್ಥವಾಗಿ ನಿಭಾಯಿಸಿ ಬಿ.ಎಸ್.ಯಡಿಯೂರಪ್ಪ ಅಧಿಕಾರ ಬಿಟ್ಟುಕೊಟ್ಟರು. ಆದರೆ, ನಂತರ ಬಂದವರು ಕಾರ್ಯಕರ್ತರ ಇಚ್ಛೆಗೆ ತಕ್ಕಂತೆ ನಡೆದುಕೊಳ್ಳಲಿಲ್ಲ. ಹರ್ಷ ಹಾಗೂ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಗಳಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಿಲ್ಲ‘ ಎಂದು ಸಂಸದ ಪ್ರತಾಪಸಿಂಹ, ತಮ್ಮದೇ ಪಕ್ಷದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಪರೋಕ್ಷವಾಗಿ ಕಿಡಿಕಾಡಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘2018ರ ವಿಧಾನಸಭಾ ಚುನಾವಣೆಯಲ್ಲಿ ಯಡಿಯೂರಪ್ಪ ನೇತೃತ್ವ ಹಾಗೂ ಕಾರ್ಯಕರ್ತರ ಛಲದಿಂದ ಪಕ್ಷವು 104 ಸ್ಥಾನಗಳನ್ನು ಗೆದ್ದಿತ್ತು. ಒಂದು ವರ್ಷದ ನಂತರ ಅಧಿಕಾರಕ್ಕೆ ಬಂದಿತ್ತು. ಯಡಿಯೂರಪ್ಪ ನಂತರ ಚುಕ್ಕಾಣಿ ಹಿಡಿದವರಿಗೆ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರಬೇಕೆನ್ನುವ ಛಲವಿರಲಿಲ್ಲ’ ಎಂದು ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.