ರಾಮನಗರ: ಇಲ್ಲಿನ ಜಾನಪದ ಲೋಕದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಜಾನಪದ ಹಬ್ಬ. 'ಪ್ರವಾಸಿ ಜಾನಪದ ಲೋಕೋತ್ಸವ ' ಕಾರ್ಯಕ್ರಮದ ಅಂಗವಾಗಿ ನಾಡಿನ ಜಾನಪದ ಕಲಾವಿದರೆಲ್ಲ ಒಗ್ಗೂಡಿದ್ದು, ಕಂಸಾಳೆ, ಡೊಳ್ಳು, ಪೂಜಾ ಕುಣಿತ, ಪಟ ಕುಣಿತ ಸೇರಿದಂತೆ ವಿವಿಧ ಪ್ರಕಾರಗಳ ಕಲಾ ಪ್ರದರ್ಶನ ಇಲ್ಲಿ ನಡೆದಿದೆ.
ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಮೊದಲಾದ ಹೊರರಾಜ್ಯಗಳ ನೂರಕ್ಕೂ ಹೆಚ್ಚು ಕಲಾವಿದರೂ ಸಹ ಭಾಗಿ ಆಗಿದ್ದಾರೆ. ಶುಕ್ರವಾರ ಬೆಳಗ್ಗೆ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಲೋಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶನಿವಾರ ಸಂಜೆ ಇದೇ ವೇದಿಕೆಯಲ್ಲಿ ನಾಡಿನ 32 ಕಲಾವಿದರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಭಾನುವಾರ ಇಡೀ ದಿನ ಕಲಾ ಪ್ರದರ್ಶನ ಇರಲಿದೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.