ADVERTISEMENT

ಸಿದ್ಧಸಿರಿ ಕಾರ್ಖಾನೆ ವಿರುದ್ಧದ ಖಾಸಗಿ ದೂರು ವಜಾ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2024, 21:20 IST
Last Updated 3 ಸೆಪ್ಟೆಂಬರ್ 2024, 21:20 IST
ಬಸನಗೌಡ ಪಾಟೀಲ ಯತ್ನಾಳ್‌
ಬಸನಗೌಡ ಪಾಟೀಲ ಯತ್ನಾಳ್‌   

ಬೆಂಗಳೂರು: ‘ಸಂಸ್ಕರಣೆ ಮಾಡದೆ ತ್ಯಾಜ್ಯವನ್ನು ನದಿಗೆ ಹೊರ ಹಾಕುವ ಮೂಲಕ ಜಲ ಮತ್ತು ಪರಿಸರ ಕಾಯ್ದೆ ಉಲ್ಲಂಘನೆ ಮಾಡಲಾಗಿದೆ’ ಎಂದು ಆರೋಪಿಸಿ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನಲ್ಲಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಒಡೆತನದ ಮೆಸರ್ಸ್‌ ಸಿದ್ಧಸಿರಿ ಸೌಹಾರ್ದ ಸಹಕಾರಿ ನಿಯಮಿತ ಸಕ್ಕರೆ ಕಾರ್ಖಾನೆ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಈ ಕುರಿತಂತೆ ಬಸನಗೌಡ ಪಾಟೀಲ ಯತ್ನಾಳ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಪ್ರಕಟಿಸಿತು.

‘ಮೆಸರ್ಸ್‌ ಸಿದ್ಧಸಿರಿ ಸೌಹಾರ್ದ ಸಹಕಾರಿ ನಿಯಮಿತ ಸಕ್ಕರೆ ಕಾರ್ಖಾನೆಯು ಎಥೆನಾಲ್‌ ವಿದ್ಯುತ್‌ ಸ್ಥಾವರದ ಘಟಕವನ್ನೂ ಹೊಂದಿದೆ. ಕಾರ್ಖಾನೆಯು ನೀರು ಮತ್ತು ಘನತ್ಯಾಜ್ಯವನ್ನು ಸಂಸ್ಕರಣೆ ಮಾಡದೆ ಅವೈಜ್ಞಾನಿಕ ರೀತಿಯಲ್ಲಿ ಹೊರ ಹಾಕುವ ಮೂಲಕ ಜಲ ಕಾಯ್ದೆ–1974ರ ಕಲಂ 43, 44 ಮತ್ತು 47 ಹಾಗೂ ಪರಿಸರ ಕಾಯ್ದೆ ಉಲ್ಲಂಘಿಸಿದೆ’ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಾರ್ಖಾನೆಯ ವಿರುದ್ಧ ಚಿಂಚೋಳಿಯ ಪ್ರಧಾನ ಸಿವಿಲ್ ನ್ಯಾಯಾಧೀಶ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಕ್ರಿಮಿನಲ್‌ ಪ್ರಕರಣ ದಾಖಲಿಸಿತ್ತು. ಅರ್ಜಿದಾರರು ಇದನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.