ವಿಧಾನ ಪರಿಷತ್: ‘ಸಾವರ್ಕರ್ ಭಾವಚಿತ್ರವನ್ನು ಉಭಯ ಸದನಗಳ ಗ್ಯಾಲರಿಯಿಂದ ತೆಗೆಯುತ್ತೇನೆ’ ಎಂದು ಹೇಳಿರುವ ಸಚಿವ ಪ್ರಿಯಾಂಕ್ ಖರ್ಗೆ ಕ್ಷಮೆ ಯಾಚಿಸಬೇಕು’ ಎಂದು ಬಿಜೆಪಿಯ ಎನ್. ರವಿಕುಮಾರ್ ಒತ್ತಾಯಿಸಿದರು.
ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ‘ಬೆಳಗಾವಿಯ ಸುವರ್ಣ ವಿಧಾನಸೌಧದ ಉಭಯ ಸದನಗಳ ಗ್ಯಾಲರಿಯಲ್ಲಿ ಅಳವಡಿಸಿರುವ ಸಾವರ್ಕರ್ ಭಾವಚಿತ್ರವನ್ನು ಅವಕಾಶ ನೀಡಿದರೆ ನಾನು ತೆಗೆಯುತ್ತೇನೆಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಒಬ್ಬ ಜವಾಬ್ದಾರಿಯುತ ಸಚಿವರಾಗಿ ಈ ರೀತಿ ಹೇಳಿರುವುದನ್ನು ವಿರೋಧಿಸುತ್ತೇನೆ’ ಎಂದರು.
‘ವಿಧಾನ ಮಂಡಲದ ಗ್ಯಾಲರಿಯಲ್ಲಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮಹನೀಯರನ್ನು ಸ್ಮರಣೆ ಮಾಡಿ ಅವರ ಪ್ರೇರಣೆ ಪಡೆದುಕೊಳ್ಳುವ ಸಲುವಾಗಿ ಉಭಯ ಸದನದ ಸಭಾಧ್ಯಕ್ಷರು ಮತ್ತು ಸರ್ಕಾರದ ನಿಯಮಗಳ ಪ್ರಕಾರ ಭಾವಚಿತ್ರವನ್ನು ಅಳವಡಿಸಲಾಗಿದೆ. ಆದರೆ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ಬಗ್ಗೆ ಸಚಿವರು ಈ ರೀತಿ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಅದರ ಮೂಲಕ ಜನರ ಭಾವನೆಗಳಿಗೆ ಧಕ್ಕೆ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.