ADVERTISEMENT

ದರ್ಶನ್ ಜೈಲಿನಲ್ಲಿ ವಿಶೇಷ ಆತಿಥ್ಯ: ಮಧ್ಯಂತರ ವರದಿಯಲ್ಲಿ ಏನಿದೆ?

ನಗರ ಪೊಲೀಸ್‌ ಕಮಿಷನರ್‌ಗೆ ಮಧ್ಯಂತರ ವರದಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2024, 0:18 IST
Last Updated 5 ಅಕ್ಟೋಬರ್ 2024, 0:18 IST
ದರ್ಶನ್
ದರ್ಶನ್   

ಬೆಂಗಳೂರು: ನಟ ದರ್ಶನ್‌ ಹಾಗೂ ವಿಲ್ಸನ್‌ ಗಾರ್ಡನ್‌ ನಾಗ ಅಲಿಯಾಸ್ ನಾಗರಾಜ್ ಸೇರಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಕೈದಿಗಳಿಗೆ ವಿಶೇಷ ಆತಿಥ್ಯ ಕಲ್ಪಿಸಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಆಗ್ನೇಯ ವಿಭಾಗದ ಪೊಲೀಸರು, ನಗರ ಪೊಲೀಸ್‌ ಕಮಿಷನರ್‌ ಬಿ.ದಯಾನಂದ ಅವರಿಗೆ ಮಧ್ಯಂತರ ವರದಿ ಸಲ್ಲಿಸಿದ್ದಾರೆ.

ಅಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಅವರು ಈ ವರದಿ ಸಲ್ಲಿಸಿದ್ದಾರೆ.

‘ತನಿಖೆಗೆ ಮೂರು ತಂಡ ರಚಿಸಲಾಗಿತ್ತು. ತನಿಖೆ ಬಹುತೇಕ ಮುಗಿದಿದೆ. ಅಂತಿಮ ವರದಿಯನ್ನು ಶೀಘ್ರದಲ್ಲೇ ಪೊಲೀಸ್‌ ಕಮಿಷನರ್ ಅವರಿಗೆ ಸಲ್ಲಿಸಲಾಗುವುದು. ನ್ಯಾಯಾಲಯಕ್ಕೂ ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ADVERTISEMENT

ಮಧ್ಯಂತರ ವರದಿಯಲ್ಲಿ ಏನಿದೆ?: ‘ಹಣದ ಆಮಿಷಕ್ಕೆ ಒಳಗಾಗಿ ಜೈಲು ಸಿಬ್ಬಂದಿ, ಅಧಿಕಾರಿಗಳು, ವಿಚಾರಣಾಧೀನ ಕೈದಿಗಳಿಗೆ ವಿಶೇಷ ಆತಿಥ್ಯ ಕಲ್ಪಿಸುತ್ತಿದ್ದರು. ಮೊಬೈಲ್‌ ಬಳಕೆಗೆ ಅವಕಾಶ ನೀಡುತ್ತಿದ್ದರು’ ಎಂಬುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಗೊತ್ತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.