ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರ ಅವರ ಪತ್ನಿ ಸತ್ಯಭಾಮ (76) ಅವರು ಮಂಗಳವಾರ ಬೆಳಿಗ್ಗೆ ನಿಧನರಾದರು.
ಅವರು ಹೃದಯ ಸಂಬಂಧಿ ಅನಾರೋಗ್ಯಕ್ಕೀಡಾಗಿದ್ದರು. ಜಯದೇವ ಹೃದ್ರೋಗ ಆಸ್ಪತ್ರೆಗೆ ಇದೇ 3ರಂದು ಅವರನ್ನು ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಬೆಳಿಗ್ಗೆ 6.15ಕ್ಕೆ ಕೊನೆಯುಸಿರೆಳೆದಿದ್ದಾರೆ.
ಕತ್ರಿಗುಪ್ಪೆಯಲ್ಲಿರುವ ಅವರ ನಿವಾಸ ಸಿರಿ ಸಂಪಿಗೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
Koo Appಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಹಾಗೂ ನಾಡಿನ ಖ್ಯಾತ ಸಾಹಿತಿಗಳಾದ ಡಾ. ಚಂದ್ರಶೇಖರ ಕಂಬಾರರ ಧರ್ಮ ಪತ್ನಿ ಶ್ರೀಮತಿ ಸತ್ಯಭಾಮ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬ ವರ್ಗ ಮತ್ತು ಹಿತೈಷಿಗಳಿಗೆ ನೋವನ್ನು ಭರಿಸುವ ಶಕ್ತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ.- Dr. Ashwathnarayan C. N. | ಡಾ. ಅಶ್ವಥ್ ನಾರಾಯಣ್ ಸಿ.ಎನ್. (@drashwathnarayan) 18 Jan 2022
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.