ADVERTISEMENT

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ: ತಿದ್ದುಪಡಿಗೆ ಸಮ್ಮತಿ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2024, 16:35 IST
Last Updated 22 ಆಗಸ್ಟ್ 2024, 16:35 IST
<div class="paragraphs"><p>ಸಚಿವ ಸಂಪುಟ</p></div>

ಸಚಿವ ಸಂಪುಟ

   

ಬೆಂಗಳೂರು: ಪ್ರಾಥಮಿಕ ಶಾಲೆಗಳ ಪದವೀಧರ ಶಿಕ್ಷಕರ ಬಡ್ತಿ ತಾರತಮ್ಯ ಹೋಗಲಾಡಿಸಲು ನೇಮಕಾತಿ ನಿಯಮಗಳ ತಿದ್ದುಪಡಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

2016ಕ್ಕಿಂತ ಮೊದಲು ನೇಮಕವಾದ ಶಿಕ್ಷಕರಿಗೆ 2017ರ ನಿಯಮ ಅನ್ವಯಿಸಬಾರದು. 1ರಿಂದ 8ನೇ ತರಗತಿಯ ಪ್ರಾಥಮಿಕ ಶಾಲೆಗಳಿಗೆ ನೇಮಕವಾದ ಶಿಕ್ಷಕರನ್ನು 1ರಿಂದ 5ನೇ ತರಗತಿಗೆ ಸೀಮಿತಗೊಳಿಸಿರುವ ಆದೇಶವನ್ನು ಹಿಂಪಡೆಯಬೇಕು. ಪದವಿ ವಿದ್ಯಾರ್ಹತೆ ಹೊಂದಿರುವ ಶಿಕ್ಷಕರನ್ನು ಪದವೀಧರ ಪ್ರಾಥಮಿಕ ಶಿಕ್ಷಕರು (ಜಿಪಿಟಿ) ಎಂದು ಪರಿಗಣಿಸಬೇಕು. ಅದಕ್ಕಾಗಿ ಬಡ್ತಿ, ವರ್ಗಾವಣೆಗೆ ಅಡ್ಡಿಯಾಗಿರುವ ವೃಂದ ಮತ್ತು ನೇಮಕಾತಿ ನಿಯಮ–2017ಕ್ಕೆ ತಿದ್ದುಪಡಿ ತಂದು ನ್ಯಾಯ ದೊರಕಿಸಿಕೊಡಬೇಕು ಎಂಬ ಬೇಡಿಕೆ ಇಟ್ಟಿದ್ದರು.

ADVERTISEMENT

ಅಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ತಾರತಮ್ಯ ನಿವಾರಿಸಿ, ಬಡ್ತಿ ನೀಡುವ ಭರವಸೆ ನೀಡಿದ್ದರು. ಕರ್ನಾಟಕ ಆಡಳಿತ ನ್ಯಾಯ ಮಂಡಳಿ ಸಹ ಪದವೀಧರ ಪ್ರಾಥಮಿಕ ಶಿಕ್ಷಕರ ವೃಂದಕ್ಕೆ ಬಡ್ತಿ ನೀಡಲು ಆದೇಶಿಸಿತ್ತು. ಈಗ ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ತಾಂತ್ರಿಕ ಶಿಕ್ಷಣ ಇಲಾಖೆ) (ವೃಂದ ಮತ್ತು ನೇಮಕಾತಿ) ನಿಯಮಗಳು 2024ಕ್ಕೆ ಸಂಪುಟ ಸಭೆಯ ಅನುಮೋದನೆ ದೊರೆತಿದೆ.

ತಾಂತ್ರಿಕ ಶಿಕ್ಷಣ ಇಲಾಖೆಯ ಬೋಧಕ ಹುದ್ದೆಗಳನ್ನು ಎಐಸಿಟಿಇ ವೇತನ ಶ್ರೇಣಿ ನಿಯಮಗಳ ಪ್ರಕಾರ ಭರ್ತಿ ಮಾಡಬೇಕು. 7ನೇ ವೇತನ ಶ್ರೇಣಿಯನ್ನು ಅಳವಡಿಸಿಕೊಳ್ಳಲು ಹೊಸ ವೃಂದ ಮತ್ತು ನೇಮಕಾತಿ ನಿಯಮಾವಳಿ ಜಾರಿ ಮಾಡಲೂ ಸಭೆ ಸಮ್ಮತಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.