ಬೆಂಗಳೂರು: ಮೂವರು ಐಎಎಸ್ ಹಿರಿಯ ಅಧಿಕಾರಿಗಳಿಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಬಡ್ತಿನೀಡಿ ಆದೇಶಿಸಲಾಗಿದೆ.
ಜಲಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್, ಯೋಜನೆ ಹಾಗೂ ಕಾರ್ಯಕ್ರಮ ನಿರ್ವಹಣೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರಿಗೆ ಬಡ್ತಿ ನೀಡಲಾಗಿದ್ದು, ಸಂಬಂಧಿಸಿದ ಇಲಾಖೆಗಳಲ್ಲೇ ಮುಂದುವರಿಸಲಾಗಿದೆ.
ನಿಯೋಜನೆ ಮೇಲೆ ಕೇಂದ್ರ ಸೇವೆಯಲ್ಲಿರುವಹಣಕಾಸು ಸಚಿವಾಲಯದ ಕಂದಾಯ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಅನಿಲ್ ಕುಮಾರ್ ಝಾ ಅವರಿಗೆ ಅಪೆಕ್ಸ್ ಸ್ಕೇಲ್‌ಗೆ ಬಡ್ತಿ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.