ADVERTISEMENT

ಹೊಸ ಆಂಗ್ಲ ಮಾಧ್ಯಮ ಶಾಲೆಗಳಿಗೆ ಪ್ರಸ್ತಾವ

​ಪ್ರಜಾವಾಣಿ ವಾರ್ತೆ
Published 2 ಜೂನ್ 2023, 22:47 IST
Last Updated 2 ಜೂನ್ 2023, 22:47 IST
   

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹೊಸದಾಗಿ ಆಂಗ್ಲ ಮಾಧ್ಯಮ ಶಾಲೆ ಆರಂಭಿಸಲು, ಹೆಚ್ಚುವರಿ ವಿಭಾಗದ ಅಗತ್ಯ ಇರುವ ಶಾಲೆಗಳು ನಿಗದಿತ ನಮೂನೆಯಲ್ಲಿ ಪ್ರಸ್ತಾವ ಸಲ್ಲಿಸುವಂತೆ ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ.

ರಾಜ್ಯದ ಬಹುತೇಕ ಶಾಲೆಗಳು ಏಕರೀತಿಯ ಪ್ರಸ್ತಾವ ಸಲ್ಲಿಸದ ಕಾರಣ ಗೊಂದಲಗಳಾಗಿವೆ. ಹಾಗಾಗಿ, ನಿಯಮಗಳಿಗೆ ಅನುಗುಣವಾಗಿ ಒಂದೇ ಮಾದರಿಯಲ್ಲಿ ಪ್ರಸ್ತಾವಗಳನ್ನು ಸಲ್ಲಿಸಬೇಕು. ಆಯಾ ಜಿಲ್ಲೆಯ ಉಪ ನಿರ್ದೇಶಕರು ಈ ಕುರಿತು ಮೇಲ್ವಿಚಾರಣೆ ನಡೆಸಬೇಕು ಎಂದು ಸುತ್ತೋಲೆಯಲ್ಲಿ ವಿವರಿಸಲಾಗಿದೆ.

ಹೊಸದಾಗಿ ಸರ್ಕಾರಿ ಶಾಲೆ ಆರಂಭ, ಒಂದನೇ ತರಗತಿಯಿಂದಲೇ ಕನ್ನಡ ಮಾಧ್ಯಮದ ಜತೆ ಆಂಗ್ಲ ಮಾಧ್ಯಮಕ್ಕೂ ಅವಕಾಶ, ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಬೇಡಿಕೆಗೆ ಅನುಗುಣವಾಗಿ ಹೆಚ್ಚುವರಿ ಆಂಗ್ಲ ಮಧ್ಯಮ ತರಗತಿಗಳಿಗೆ ಅವಕಾಶ, ಸರ್ಕಾರಿ ಶಾಲೆಗಳ ವಿಲೀನ, ಸ್ಥಳಾಂತರಕ್ಕೆ ಪ್ರಸ್ತಾವ ಸಲ್ಲಿಸಬಹುದು ಎಂದು ಆಯುಕ್ತೆ ಬಿ.ಬಿ.ಕಾವೇರಿ ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.